ಗೃಹಲಕ್ಷ್ಮೀ ವಿವಾದ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಂದ್ರಲೋಕದಲ್ಲಿದ್ದಾರಾ?- ಆರ್. ಅಶೋಕ್ ಕಿಡಿ
ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ವಿಳಂಬ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗೈರುಹಾಜರಿ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಸದನದಲ್ಲಿ ಆರ್. ಅಶೋಕ್ ಕಿಡಿ
ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗೈರುಹಾಜರಿ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾಪತ್ತೆಯಾದ ಸಚಿವೆ ಎಲ್ಲಿದ್ದಾರೆ?
ಸದನ ಆರಂಭವಾಗುತ್ತಿದ್ದಂತೆಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿದ ಅಶೋಕ್, ಕಳೆದ ಮೂರು ದಿನಗಳಿಂದ ಸಚಿವರು ಸದನಕ್ಕೆ ಬಾರದೆ ನಾಪತ್ತೆಯಾಗಿದ್ದಾರೆ. ಸಚಿವರು ಏನಾದರೂ ಚಂದ್ರಲೋಕದಲ್ಲಿದ್ದಾರಾ? ಯಾಕೆ ಸದನಕ್ಕೆ ಬರುತ್ತಿಲ್ಲ?, ಪ್ರಮುಖ ಖಾತೆಯ ಜವಾಬ್ದಾರಿ ಹೊತ್ತವರು ಉತ್ತರಿಸಲು ಬೆನ್ನಟ್ಟಿ ಬರಬೇಕಾದ ಸಂದರ್ಭದಲ್ಲಿ ನಾಪತ್ತೆಯಾಗಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣದ ಕುರಿತು ಮಾತನಾಡಿದ ಅಶೋಕ್, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿರುವುದು ಶುದ್ಧ ಸುಳ್ಳು. ಸಚಿವರು ಸದನಕ್ಕೆ ಬಂದು ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಚಿವರು ಹೇಳುವುದು ಸತ್ಯ ಎಂದು ನಾವು ಭಾವಿಸುತ್ತೇವೆ, ಆದರೆ ಅವರ ಹೇಳಿಕೆಗಳೇ ಸುಳ್ಳಾದರೆ ಸದನಕ್ಕೆ ಬೆಲೆ ಎಲ್ಲಿದೆ ಎಂದು ಎಂದು ಅವರು ಸರ್ಕಾರವನ್ನು ಟೀಕಿಸಿದರು.
ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ. ಈ ವಿಚಾರವನ್ನು ಹಕ್ಕುಚ್ಯುತಿ ಎಂದು ಪರಿಗಣಿಸಿದರೆ, ಅವರು ತನಿಖೆ ಎದುರಿಸಬೇಕಾಗುತ್ತದೆ. ಈ ಕೂಡಲೇ ಸರ್ಕಾರ ಸತ್ಯಾಂಶವನ್ನು ಸದನದ ಮುಂದೆ ಇಡಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯ ಫಲಾನುಭವಿಗಳಿಗೆ ಹಣ ತಲುಪಿಲ್ಲ ಎಂಬ ವಿರೋಧ ಪಕ್ಷದ ಆರೋಪ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದಾರೆ ಎನ್ನಲಾದ ತಪ್ಪು ಮಾಹಿತಿಯ ಸುತ್ತ ಇಡೀ ರಾಜ್ಯ ರಾಜಕಾರಣದಲ್ಲಿ ಈಗ ಹೈಡ್ರಾಮಾ ಆರಂಭವಾಗಿದೆ. 5,500 ಕೋಟಿ ರೂ. ಅನುದಾನದ ಲೆಕ್ಕ ಕೇಳಿದ ಬಿಜೆಪಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಸದನದಲ್ಲಿ ದಾಖಲೆಗಳನ್ನು ಮಂಡಿಸಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಇನ್ನೂ ಜಮೆಯಾಗಿಲ್ಲ ಎಂದು ಗಂಭೀರ ಆರೋಪ ಮಾಡಿದ್ದರು. ಸುಮಾರು ಎರಡು ತಿಂಗಳ ಅವಧಿಯ 5,500 ಕೋಟಿಗೂ ಅಧಿಕ ಹಣ ಎಲ್ಲಿಗೆ ಹೋಯಿತು? ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದರು.
ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಣ ಪಾವತಿಯಾಗಿದೆ ಎಂದು ಸದನಕ್ಕೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಿದ್ದಾರೆ ಎಂದು ದೂರಿದ್ದಾರೆ. ಸದ್ಯ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಉತ್ತರಕ್ಕಾಗಿ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ.