ಎಸ್‌ಡಿಎ, ಎಫ್‌ಡಿಎ ಹುದ್ದೆಗಳಿಗೆ ಕೆಇಎ ಅರ್ಜಿ ಆಹ್ವಾನ, ಪರೀಕ್ಷೆಯಲ್ಲಿ ಮಹತ್ತರ ಬದಲಾವಣೆ!

ಈ ಕುರಿತು ಅಧಿಸೂಚನೆ ಪ್ರಕಟಿಸಿರುವ ಕೆಇಎ, ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು ಎಂದು ತಿಳಿಸಿದೆ.

Update: 2025-10-08 07:07 GMT

ಸಾಂದರ್ಭಿಕ ಚಿತ್ರ

Click the Play button to listen to article

ಸರ್ಕಾರಿ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿನ 708 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನವೆಂಬರ್‌ 1 ಕೊನೆಯ ದಿನಾಂಕವಾಗಿದೆ.

ಈ ಕುರಿತು ಅಧಿಸೂಚನೆ ಪ್ರಕಟಿಸಿರುವ ಕೆಇಎ, ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು ಎಂದು ತಿಳಿಸಿದೆ.

ಯಾವ್ಯಾವ ಇಲಾಖೆಯಲ್ಲಿ ಎಷ್ಟು ಖಾಲಿ ಹುದ್ದೆಗಳು ?

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ 25, ಕರ್ನಾಟಕ ಸೋಪ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್‌ನಲ್ಲಿ 21 , ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 44, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 19, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 316 , ಕೃಷಿ ಮಾರಾಟ ಇಲಾಖೆಯಲ್ಲಿ 180 , ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 93 ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿ 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಿದೆ.

ಯಾವ್ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನ ?

1. ಪ್ರಥಮ ದರ್ಜೆ ಸಹಾಯಕರು - 84

2. ದ್ವಿತೀಯ ದರ್ಜೆ ಸಹಾಯಕರು - 44

3. ಮಾರಾಟ ಸಹಾಯಕರು- 75

4. ಸಹಾಯಕ ಅಭಿಯಂತರರು - 15

5. ಲೆಕ್ಕಪತ್ರ ಹಿರಿಯ ಮತ್ತು ಕಿರಿಯ ಅಧಿಕಾರಿ - 14

6. ನಿರ್ವಾಹಕ ಹುದ್ದೆಗಳು - 60

7. ಗ್ರಂಥಪಾಲಕರು - 10

8. ಸಹಾಯಕ ಸಂಚಾರ ನಿರೀಕ್ಷಕ - 19

ವೇತನ ಶ್ರೇಣಿ

ಪ್ರಥಮ ದರ್ಜೆ ಸಹಾಯಕ ಹುದ್ದೆಗೆ 27,650-52,650, ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ 21,400-42,000, ಲೆಕ್ಕ ಮಾರುಕಟ್ಟೆಯ ಅಧಿಕಾರಿ ಹುದ್ದೆಗೆ 40,900-78,200, ಕಿರಿಯ ಅಧಿಕಾರಿ ಹುದ್ದೆಗೆ 61,300-1,12,900, ಸಹಾಯಕ ಅಭಿಯಂತರ ಹುದ್ದೆಗೆ 43,100-83,900, ಗ್ರಂಥಪಾಲಕ ಹುದ್ದೆಗಳಿಗೆ 33,450-62,600, ಮಾರಾಟ ಸಹಾಯಕರು 34,100-67,600, ಸಹಾಯಕ ಸಂಚಾರ ನಿರೀಕ್ಷಕ ಹುದ್ದೆಗೆ 22,390-33,320, ನಿರ್ವಾಹಕ ಹುದ್ದೆಗೆ 18,660 -25,300 ರೂ. ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ

ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೇಶದಲ್ಲಿ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು. ದ್ವಿತೀಯ ದರ್ಜೆ ಸಹಾಯಕ, ಮಾರಾಟ ಸಹಾಯಕರು, ಕಿರಿಯ ಸಹಾಯಕರು, ಸಂಚಾರ ನಿಯಂತ್ರಕರು ಮತ್ತು ನಿರ್ವಾಹಕ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ನಿರ್ವಾಹಕರ ಬ್ಯಾಡ್ಜ್‌ ಹೊಂದಿರಬೇಕು. ಸಹಾಯಕ ಲೆಕ್ಕಿಗ ಹುದ್ದೆಗೆ ವಾಣಿಜ್ಯಶಾಸ್ತ್ರದಲ್ಲಿ ಪದವಿ ಪಡೆದಿರಬೇಕು.

ದೈಹಿಕ ಅರ್ಹತೆ

ನಿರ್ವಾಹಕ ಹುದ್ದೆಗೆ ಪುರುಷರು 160 ಸೆ.ಮೀ ಹಾಗೂ ಮಹಿಳೆಯರು 150 ಸೆ. ಮೀ ಎತ್ತರ ಹೊಂದಿರಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಕೆಇಎ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ

1. ಒಎಂಆರ್‌ ಆಧಾರಿತ ಪರೀಕ್ಷೆಯಾಗಿದ್ದು ಒಂದು ಪ್ರಶ್ನೆಗೆ ಒಎಂಆರ್‌ ನಲ್ಲಿ ಐದು ವೃತ್ತಗಳಿದ್ದು, ಮೊದಲ ನಾಲ್ಕು ವೃತ್ತಗಳು ಒಂದು ಸರಿಯಾದ ಉತ್ತರವನ್ನು ಶೇಡ್ ಮಾಡಲು ಸಂಬಂಧಿಸಿವೆ. ಅಭ್ಯರ್ಥಿಗೆ ಯಾವುದಾದರೂ ಪ್ರಶ್ನೆಗಳಿಗೆ ಉತ್ತರ ತಿಳಿದಿಲ್ಲದಿದ್ದರೆ ಕಡ್ಡಾಯವಾಗಿ ಐದನೇ ವೃತ್ತವನ್ನು ಶೇಡ್ ಮಾಡಬೇಕು. ಇಲ್ಲದಿದ್ದಲ್ಲಿ 0.25 ಅಂಕ ಕಡಿತ ಮಾಡಲಾಗುವುದು.

2. ಋಣಾತ್ಮಕ ಮೌಲ್ಯಮಾಪನವಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು (4) ಅಂಕಗಳನ್ನು ಕಡಿತ ಮಾಡಲಾಗುವುದು.

3. ಪರೀಕ್ಷಾ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು.

4. ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

Tags:    

Similar News