Ketaganahalli Land Dispute | ಕುಮಾರಸ್ವಾಮಿಗೆ ಸಂಕಷ್ಟ; ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ
ಕರ್ನಾಟಕ ಹೈಕೋರ್ಟ್‌ನಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಇದರಿಂದ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.;
ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣ ಸಂಬಂಧ ಸಮಾಜ ಪರಿವರ್ತನಾ ಸಮುದಾಯ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಇದರಿಂದ ಕುಮಾರಸ್ವಾಮಿ ಸಂಕಷ್ಟ ಎದುರಾಗಿದೆ.
ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರ ಮನವಿ ಪರಿಗಣಿಸಿದ ನ್ಯಾಯಾಲಯ, ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು.
ಈಗ ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿದ ಅರ್ಜಿ ವಿಲೇವಾರಿ ಆಗಿರುವುದರಿಂದ ಮಾ.27ರಂದು ಹೈಕೋರ್ಟ್ ನೀಡಿರುವ ಆದೇಶ ತೀವ್ರ ಕುತೂಹಲ ಕೆರಳಿಸಿದೆ.
ಕೇತಗಾನಹಳ್ಳಿ ಗ್ರಾಮದಲ್ಲಿ ಆರು ಎಕರೆ ಸರ್ಕಾರಿ ಭೂಮಿ ಒತ್ತುವರಿ ಸಂಬಂಧ ತಹಶೀಲ್ದಾರ್ ನೋಟಿಸ್ ನೀಡಿದ್ದು, ಮುಂದಿನ ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಕೋರಿದ್ದರು.