ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕಿಡ್ನ್ಯಾಪ್‌ ಆದ ಮಹಿಳೆ ರೇವಣ್ಣ ಪಿಎ ಮನೆಯಲ್ಲಿ ಪತ್ತೆ

Update: 2024-05-04 13:21 GMT

ಶಾಸಕ ಹೆಚ್‌ ಡಿ ರೇವಣ್ಣ ಅವರ ವಿರುದ್ಧ ದಾಖಲಾಗಿದ್ದ ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣೆಗೆಯೊಂದು ನಡೆದಿದೆ. ಅಪಹರಣಕ್ಕೀಡಾಗಿದ್ದ ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಏ.29ರಂದು ರೇವಣ್ಣ ಅವರ ಸಂಬಂಧ ಸತೀಶ್ ಬಾಬು ಎಂಬುವರು ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು ಎಂದು ಮಹಿಳೆಯ ಮಗ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್ಐಟಿ ಅಧಿಕಾರಿಗಳು, ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯ ತೋಟದ ಮನೆಯಿಂದ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಎಸ್‌ಐಟಿ ಅಧಿಕಾರಿಗಳು ರೇವಣ್ಣರ ಪಿಎ ರಾಜಶೇಖರ ಎಂಬುವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿ, ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.

ಈ ಅಪಹರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ 1ನೇ ಆರೋಪಿಯಾಗಿದ್ದಾರೆ. ಇನ್ನು 2ನೇ ಆರೋಪಿಯಾಗಿರುವ ಸತೀಶ್ ಬಾಬುಗೆ ಕೆ.ಆರ್ ನಗರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Tags:    

Similar News