ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಮತ್ತೆ ಬಂಧನ ಭೀತಿ

Update: 2024-05-27 13:20 GMT

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಜಾಮೀನನ ಮೇಲೆ ಶಾಸಕ ಹೆಚ್‌ಡಿ ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ಮುಂಜಾಗ್ರತಾವಾಗಿ ನಿರೀಕ್ಷಣಾ ಜಾಮೀನು ಕೋರಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಣ್ಣ, ಹೆಚ್​.ಡಿ ರೇವಣ್ಣ  ಆರೋಪಿಗಳಾಗಿದ್ದಾರೆ. ಪ್ರಕರಣದಲ್ಲಿ ಬಾಬಣ್ಣ ಎಂಬುವರು ನ್ಯಾಯಾಂಗ ಬಂಧನದಲ್ಲಿದ್ದು, ಹೆಚ್​.ಡಿ. ರೇವಣ್ಣ ಅವರಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ.  ಸತೀಶ್‌ ಬಾಬಣ್ಣ , ಭವಾನಿ ಅವರ ಸಂಬಂಧಿಯಾಗದ್ದು, ಅವರ ಬಗ್ಗೆ ತನಿಖೆ ಸಂದರ್ಭದಲ್ಲಿ ಮಹತ್ವದ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. 

ಎಸ್‌ಐಟಿ ಭವಾನಿ ಅವರನ್ನು ಆರೋಪಿಯಾಗಿ ಅಥವಾ ಸಾಕ್ಷಿದಾರರಾಗಿ ಪರಿಗಣಿಸುವ  ಬಗ್ಗೆ ಪರಿಶೀಲನೆ ಮಾಡಲಾಗುತ್ತಿತ್ತು. ರೇವಣ್ಣ  ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕೋರ್ಟ್​ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ (ಮೇ 28) ಮುಂದೂಡಿದೆ.

ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಲಾಗಿದೆ. ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆಂದು ಎಸ್ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡುವಂತೆ ವಕೀಲರು ಮನವಿ ಮಾಡಿದರು. ಆದ್ರೆ, ಕೋರ್ಟ್, ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ SIT ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಭವಾನಿ ರೇವಣ್ಣ ಮೇಲಿನ ಆರೋಪ ಏನು?

ಹೆಚ್‌ಡಿ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ಕುಮ್ಮಕ್ಕು ಕೊಟ್ಟಿರುವ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದ ಎರಡನೇ ಆರೋಪಿಯಾಗಿರುವ ಸತೀಶ್ ಬಾಬು ಹೇಳಿಕೆ ದಾಖಲಿಸಿಕೊಂಡಿದ್ದ ಎಸ್​ಐಟಿ, ಆತನ ಮೊಬೈಲ್ ವಶಕ್ಕೆ ಪಡೆದು ಕಾಲ್ ಡೀಟೆಲ್ಸ್ ಸಹ ಪರಿಶೀಲನೆ ಮಾಡಿತ್ತು. ಈ ವೇಳೆ ಭವಾನಿ ರೇವಣ್ಣ ಮತ್ತು ಸತೀಶ್ ಬಾಬು ಕರೆ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಆಧಾರದ ಮೇಲೆ ಎಸ್​ಐಟಿ ಭವಾನಿ ಅವರನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೂ ಸಹ ಎಸ್​ಐಟಿ ಈಗಾಗಲೇ ನೋಟಿಸ್ ಜಾರಿ ಮಾಡಿತ್ತು. ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿ ಮಾಡಿತ್ತು. ಆದ್ರೆ, ಮೊದಲ ನೋಟಿಸ್‌ಗೆ ಭವಾನಿ ರೇವಣ್ಣ ಉತ್ತರಸಿಲ್ಲ. ಮೊದಲ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಎಸ್​ಐಟಿ ಎರಡನೇ ನೋಟಿಸ್ ಜಾರಿ ನೀಡಿತ್ತು. ಇದೀಗ ಬಂಧನದ ಭೀತಿಯಿಂದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

Tags:    

Similar News