ಕಿದ್ವಾಯಿ ನಿರ್ದೇಶಕರಿಗೆ ಮತ್ತೆ ಪೂರ್ಣಾಧಿಕಾರ: ಆಡಳಿತಾಧಿಕಾರಿ ವ್ಯಾಪ್ತಿ ​ ಹಿಂಪಡೆದ ಸರ್ಕಾರ

ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಮತ್ತು ಅಕ್ರಮಗಳ ಕುರಿತು ತನಿಖೆ ನಡೆಸಲು ನೇಮಿಸಲಾಗಿದ್ದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರ ಈ ಕ್ರಮ ಕೈಗೊಂಡಿದೆ.

Update: 2025-10-07 10:41 GMT

ರಾಜ್ಯದ ಪ್ರತಿಷ್ಠಿತ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರಿಗೆ ಸಂಪೂರ್ಣ ಆಡಳಿತಾತ್ಮಕ ಮತ್ತು ಹಣಕಾಸು ಅಧಿಕಾರವನ್ನು ಪುನಃ ಸ್ಥಾಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಸ್ಥೆಯ ಆಡಳಿತಾಧಿಕಾರಿಗೆ ನೀಡಲಾಗಿದ್ದ ಎಲ್ಲಾ ಜವಾಬ್ದಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.

ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಮತ್ತು ಅಕ್ರಮಗಳ ಕುರಿತು ತನಿಖೆ ನಡೆಸಲು ನೇಮಿಸಲಾಗಿದ್ದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಆಡಳಿತಾಧಿಕಾರಿಯ ಕಾರ್ಯವೈಖರಿ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ, ಸಂಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಮರಳಿ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸರ್ಕಾರದ ಹೊಸ ಆದೇಶದ ಪ್ರಕಾರ, ಈ ಹಿಂದೆ ಇದ್ದಂತೆಯೇ ಸಂಸ್ಥೆಯ ಸಂಪೂರ್ಣ ಜವಾಬ್ದಾರಿ ನಿರ್ದೇಶಕರ ಹೆಗಲಿಗೆ ಬಂದಿದೆ. ಆಡಳಿತಾತ್ಮಕ ವಿಷಯಗಳು, ಸಿಬ್ಬಂದಿ ಸೇವಾ ನಿಯಮಗಳು, ಹಣಕಾಸು ನಿರ್ವಹಣೆ, ಸಂಗ್ರಹಣೆ, ಖರೀದಿ ಮತ್ತು ಮಾನವ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಎಲ್ಲಾ ಪ್ರಮುಖ ಅಧಿಕಾರಗಳನ್ನು ನಿರ್ದೇಶಕರಿಗೆ ಪುನಃ ಸ್ಥಾಪಿಸಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಸಂಸ್ಥೆಯ ಸುಗಮ ಕಾರ್ಯನಿರ್ವಹಣೆಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Tags:    

Similar News