ಲೋಕಸಭಾ ಚುನಾವಣೆ ಸೋಲಿನ ಸಮೀಕ್ಷೆಗೆ ಸತ್ಯ ಶೋಧನಾ ಸಮಿತಿ ರಚನೆ: ಡಿ.ಕೆ. ಶಿವಕುಮಾರ್‌

Update: 2024-07-01 14:08 GMT

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಗೆಲ್ಲದೆ ಇರುವ ಕಾರಣಕ್ಕೆ ಸೋಲಿನ ಪರಮರ್ಶೆನೆ ನಡೆಸಲು ಸತ್ಯಶೋಧನ ಸಮಿತಿ ರಚನೆ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಹೊರತಾಗಿ ಮಿಕ್ಕ ಕಡೆ ಪಕ್ಷಕ್ಕೆ ಏಕೆ ಸೋಲಾಯಿತು ಎಂದು ಪರಾಮರ್ಶನೆಗೆ ಒಳಪಡಿಸಲು ಸತ್ಯಶೋಧನ ಸಮಿತಿ ರಚಿಸಲಾಗಿದ್ದು,  ಈ ಸಮಿತಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಧ್ಯಯನ ನಡೆಸಿ ವರದಿ ನೀಡುಲಿದೆ.

ಈ ಬಗ್ಗೆ ಅಧಿಕೃತವಾಗಿ ಹೇಳಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಪಕ್ಷದ ಪದಾಧಿಕಾರಿಗಳ ಸಭೆ ನಂತರ ಮಾತನಾಡಿ, ಕರ್ನಾಟಕ ಲೋಕಸಭಾ ಚುನಾವಣೆಯ ಫಲಿತಾಂಶ ಸಮಾಧಾನಕರವಾಗಿಲ್ಲ. 15 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎನ್ನುವ ನಿರೀಕ್ಷೆ ಸುಳ್ಳಾಗಿದೆ. ಚುನಾವಣೆಯಲ್ಲಿ ಹೊಸಮುಖಗಳಿಗೆ ಹಾಗೂ ಆರು ಜನ ಮಹಿಳೆಯರಿಗೆ ಅವಕಾಶ ಮಾಡಿಕೊಡಲಾಯಿತು. ಇದರಲ್ಲಿ ಇಬ್ಬರು ಗೆದ್ದಿದ್ದಾರೆ. ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಮಾತ್ರ ಗಳಿಸುತ್ತದೆ ಎಂದು ಮಾಧ್ಯಮಗಳ ಹೇಳಿದ್ದವು. ಆದರೆ ಎಲ್ಲವೂ ತಲೆಕೆಳಗಾಗಿ ನಾವು 9 ಸ್ಥಾನಗಳನ್ನು ಗೆದ್ದೆವು. ಈ ಫಲಿತಾಂಶ ನಮಗೆ ಸಮಾಧಾನ ತಂದಿಲ್ಲ. ಇನ್ನು ಇನ್ನು ನಾಲ್ಕೈದು ಸ್ಥಾನಗಳನ್ನು ಗೆಲ್ಲಬಹುದಾಗಿತ್ತು ಎಂದರು.

ಎಲ್ಲಿ ಎಡವಲಾಯಿತು. ಎಲ್ಲಾ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೆ ತಂದರು ಏಕೆ ಜನ ನಮ್ಮ ಕೈ ಹಿಡಿಯಲಿಲ್ಲ ಎಂದು ಚಿಂತನೆ ಮಾಡಲಾಗುವುದು. ಕರ್ನಾಟಕದಲ್ಲಿ ಮೋದಿ ಅಲೆ ಇರಲಿಲ್ಲ. ನಮ್ಮಲ್ಲಿ ಬಿಜೆಪಿಯವರಂತೆ ಒಳಜಗಳ ಇರಲಿಲ್ಲ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದರು ಏಕೆ ಸೋಲಾಯಿತು ಎಂದು ಸತ್ಯಶೋಧನೆ ಮಾಡಲಾಗುವುದು. ವಿಭಾಗವಾರು ನಾಲ್ಕು ಸಭೆಗಳನ್ನು ನನ್ನ ಮತ್ತು ಸಿಎಂ ಅವರ ನೇತೃತ್ವದಲ್ಲಿ ನಡೆಸಲಾಗುವುದು ಎಂದರು. ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿ ರಾಜ್ಯಗಳಿಗೆ ಎಐಸಿಸಿ ಸತ್ಯಶೋಧನ ಸಮಿತಿಯ ಭೇಟಿ ನೀಡಲಿದೆ. ಆ ಸಮಿತಿಯು ಪ್ರತಿ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣಕ್ಕೆ ಅವರಿಗೆ ರಾಜ್ಯದ ವರದಿಯನ್ನು ಸಲ್ಲಿಸಲಾಗುವುದು ಎಂದೂ ಡಿ.ಕೆ. ಶಿವಕುಮಾರ್‌ ಹೇಳಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಹಗರಣಗಳ ವಿರುದ್ಧ ನಿರ್ಣಯ

ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಮೂರನೇ ಅವಧಿಗೆ ಅಧಿಕಾರ ಹಿಡಿದ ತಕ್ಷಣ ಷೇರು ಪೇಟೆ ಹಗರಣ, ನೀಟ್ ಮತ್ತು ನೆಟ್ ಹಗರಣ ನಡೆಯಿತು. ಇದರ ಕುರಿತು ಖಂಡನ ನಿರ್ಣಯ ಅಂಗೀಕಾರ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಖಂಡಿಸಿ ಹೋರಾಟ ಮುಂದುವರೆಸಲಾಗುವುದು. ಲೋಕಸಭಾ ಸದನದಲ್ಲಿ ಬಿಜೆಪಿಯ ಹಗರಣಗಳ ಕುರಿತು ಚರ್ಚೆ ನಡೆಸಲು ಅವಕಾಶ ಮಾಡಿಕೊಟ್ಟಿಲ್ಲ. ಅಲ್ಲದೇ ಮೈಕ್ ಗಳನ್ನು ಬಂದ್ ಮಾಡಲಾಗಿತ್ತು ಎನ್ನುವ ಆರೋಪವಿದೆ.

ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಇದರಿಂದ ಉತ್ತಮ ಸ್ಥಾನಗಳನ್ನು ಗೆಲ್ಲಲಾಯಿತು. ಇದೇ ಸಂಪ್ರದಾಯವನ್ನು ಮುಂದಿನ ದಿನಗಳಲ್ಲಿ ಮುಂದುವರೆಸಲಾಗುವುದು.

ಉಪಚುನಾವಣೆ ಎದುರಿಸಲು ತಂಡ ರಚನೆ

ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಉಪಚುನಾವಣೆಯನ್ನು ಎದುರಿಸಲು ಮೂರು ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಶಿಗ್ಗಾವಿ ಕ್ಷೇತ್ರದ ವರದಿ ನೀಡಲಾಗಿದೆ. ಜುಲೈ 3 ರ ನಂತರ ಸಂಡೂರಿನ ವರದಿ ಸಲ್ಲಿಸುತ್ತಾರೆ. ಸಚಿವರಾದ ಚಲುವರಾಯಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಕುರಿತು ವರದಿ ನೀಡುತ್ತಾರೆ.

 

Tags:    

Similar News