ಒಎಂಆರ್ ಶೀಟ್ ವಿತರಣೆ ವಿಳಂಬ ಖಂಡಿಸಿ ಕೆಪಿಎಸ್‌ಸಿ ಪರೀಕ್ಷಾರ್ಥಿಗಳ ಪ್ರತಿಭಟನೆ
15 ನಿಮಿಷಗಳ ಕಾಲ ಒಎಂಆರ್ ಶೀಟ್ ವಿತರಣೆ ವಿಳಂಬ ಖಂಡಿಸಿ ಕೆಪಿಎಸ್‌ಸಿ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಮಂಗಳವಾರ ಬೆಳಗಾವಿ ಪರೀಕ್ಷಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದರು.;
ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಒಎಂಆರ್ ಶೀಟ್ ವಿತರಣೆಗೆ 15 ನಿಮಿಷಗಳ ಕಾಲ ವಿಳಂಬ ಮಾಡಿದ್ದನ್ನು ಖಂಡಿಸಿ ಕೆಪಿಎಸ್‌ಸಿ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಗಾವಿ ಪರೀಕ್ಷಾ ಕೇಂದ್ರದಲ್ಲಿ ನಡೆಯಿತು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಅಂಜುಮನ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಅಭ್ಯರ್ಥಿಗಳು ಪಟ್ಟು ಹಿಡಿದಿದ್ದರು.
ಬಳಿಕ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಒಎಂಆರ್ ಶೀಟ್ ಇರುವ ಬಾಕ್ಸ್‌ಗಳು ಮತ್ತು ಕೊಠಡಿಗಳನ್ನು ಬದಲಾಯಿಸಿದ್ದರಿಂದ ವಿಳಂಬವಾಗಿದೆ ಎಂದು ಅಭ್ಯರ್ಥಿಗಳಿಗೆ ತಿಳಿಸಿದರು. ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯವನ್ನು ನೀಡಲಾಗುವುದು ಮತ್ತು ಪೆಟ್ಟಿಗೆಗಳನ್ನು ಬದಲಾಯಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.
ಕೆಪಿಎಸ್‌ಸಿ ಆಗಸ್ಟ್ 27ರ ಮಂಗಳವಾರ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ನಡೆದಿದ್ದು, ಸುಮಾರು 2,10,910 ಅಭ್ಯರ್ಥಿಗಳು ಈ ಪರೀಕ್ಷೆ ಬರೆದಿದ್ಧಾರೆ. ಪರೀಕ್ಷೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಕೆಲವರು ಶನಿವಾರ ಬೆಂಗಳೂರಿನಲ್ಲಿ ಪ್ರತಿಭಟನೆಯೂ ನಡೆಸಿದ್ದರು.