ಮಹಿಳಾ ಸಾರಿಗೆ ನೌಕರರಿಗೆ ಸಿಹಿಸುದ್ದಿ- ಋತುಚಕ್ರ ರಜೆ ಬಗ್ಗೆ ಅಧಿಕೃತ ಆದೇಶ

18 ರಿಂದ 52 ವರ್ಷ ವಯೋಮಿತಿಯೊಳಗಿನ ನಿಗಮದ ಎಲ್ಲಾ ಮಹಿಳಾ ನೌಕರರು ಈ ರಜೆ ಪಡೆಯಲು ಅರ್ಹರಾಗಿರುತ್ತಾರೆ. ಈ ಸೌಲಭ್ಯ ಒಪ್ಪಂದ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮಹಿಳೆಯರಿಗೂ ಲಭ್ಯವಿರಲಿದೆ.

Update: 2025-12-24 08:30 GMT

ಸಾಂದರ್ಭಿಕ ಚಿತ್ರ 

Click the Play button to listen to article

ರಾಜ್ಯದ ಸಾರಿಗೆ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ  ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ 'ಋತುಚಕ್ರ ರಜೆ' ನೀಡಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ನಿಗಮದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮಹಿಳಾ ಸಿಬ್ಬಂದಿಗೆ ಈ ಸೌಲಭ್ಯ ಅನ್ವಯವಾಗಲಿದೆ. ಆ ಮೂಲಕ ಹೊಸವರ್ಷಕ್ಕೆ ಸರ್ಕಾರದಿಂದ ಬಂಪರ್‌ ಗಿಫ್ಟ್‌ ಸಿಕ್ಕಂತಾಗಿದೆ.

ಸುತ್ತೋಲೆಯಲ್ಲಿ ಏನಿದೆ?

18 ರಿಂದ 52 ವರ್ಷ ವಯೋಮಿತಿಯೊಳಗಿನ ನಿಗಮದ ಎಲ್ಲಾ ಮಹಿಳಾ ನೌಕರರು ಈ ರಜೆ ಪಡೆಯಲು ಅರ್ಹರಾಗಿರುತ್ತಾರೆ. ಈ ಸೌಲಭ್ಯವು ಕಾಯಂ ನೌಕರರು ಮಾತ್ರವಲ್ಲದೆ, ಒಪ್ಪಂದ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮಹಿಳೆಯರಿಗೂ ಲಭ್ಯವಿರಲಿದೆ.

ವಿಶೇಷವೆಂದರೆ, ಈ ರಜೆಯನ್ನು ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣಪತ್ರವನ್ನು ಒದಗಿಸುವ ಅಗತ್ಯವಿರುವುದಿಲ್ಲ. ಸಾಂದರ್ಭಿಕ ರಜೆ (CL) ಮಂಜೂರು ಮಾಡುವ ಅಧಿಕಾರ ಹೊಂದಿರುವ ಸಕ್ಷಮ ಪ್ರಾಧಿಕಾರಿಯೇ ಈ ಋತುಚಕ್ರ ರಜೆಯನ್ನೂ ಮಂಜೂರು ಮಾಡಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ರಜೆ ಪಡೆಯಲು ಕೆಲವೊಂದು ನಿಯಮಗಳಿವೆ

  • ಪ್ರತಿ ತಿಂಗಳಿಗೆ ಒಂದು ದಿನದಂತೆ ವರ್ಷಕ್ಕೆ ಒಟ್ಟು 12 ದಿನಗಳ ರಜೆ ಸಿಗಲಿದೆ.
  • ಆಯಾ ತಿಂಗಳ ರಜೆಯನ್ನು ಅದೇ ತಿಂಗಳಲ್ಲೇ ಬಳಸಿಕೊಳ್ಳಬೇಕು.
  • ಒಂದು ತಿಂಗಳ ರಜೆಯನ್ನು ಮುಂದಿನ ತಿಂಗಳಿಗೆ ವರ್ಗಾಯಿಸಲು ಅಥವಾ ಸಂಯೋಜಿಸಲು ಅವಕಾಶ ಇರುವುದಿಲ್ಲ. 
  • ಹಾಜರಾತಿ ಪುಸ್ತಕದಲ್ಲಿ ಈ ರಜೆಯನ್ನು ಪ್ರತ್ಯೇಕವಾಗಿಯೇ ನಮೂದಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈಗಾಗಲೇ ರಾಜ್ಯ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ಖಾಸಗಿ ಮತ್ತು ಸರ್ಕಾರಿ ವಲಯದ ಮಹಿಳಾ ನೌಕರರಿಗೆ ಈ ರಜೆ ಘೋಷಿಸಿತ್ತು. ಇದೀಗ ಸಾರಿಗೆ ನಿಗಮವೂ ತನ್ನ ನೌಕರರಿಗೆ ಈ ಸೌಲಭ್ಯ ವಿಸ್ತರಿಸಿರುವುದು ಮಹಿಳಾ ಸಿಬ್ಬಂದಿ ವರ್ಗದಲ್ಲಿ ಹರ್ಷ ತಂದಿದೆ.

Tags:    

Similar News