Lakshmi Hebbalkar : ಲಕ್ಷ್ಮಿ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆ; ವೈದ್ಯರಿಗೆ ಕೃತಜ್ಞತಾ ಪತ್ರ

Lakshmi Hebbalkar| ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಬೆನ್ನಿನ ಭಾಗಕ್ಕೆ ಪೆಟ್ಟು ಬಿದ್ದಿತ್ತು. L1 ಹಾಗೂ L4 ಮೂಳೆಗಳಿಗೆ ಹಾನಿಯಾಗಿತ್ತು. ಹಾಗಾಗಿ 13 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.;

Update: 2025-01-26 05:46 GMT
Lakshmi Hebbalkar : ಲಕ್ಷ್ಮಿ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆ; ವೈದ್ಯರಿಗೆ ಕೃತಜ್ಞತಾ ಪತ್ರ
ಲಕ್ಷ್ಮೀ ಹೆಬ್ಬಾಳ್ಕರ್‌

ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) 13 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದು ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ. ಒಂದು ತಿಂಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚನೆ ನೀಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ಕಾರು ಜನವರಿ 14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ ಅವರ ಬೆನ್ನಿನ ಭಾಗಕ್ಕೆ ಪೆಟ್ಟು ಬಿದ್ದಿತ್ತು. L1 ಹಾಗೂ L4 ಮುರಿತವಾಗಿತ್ತು. ಹಾಗಾಗಿ 13 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವ ಸಚಿವೆ ವೈದ್ಯರಿಗೆ ಭಾವನಾತ್ಮಕ ಪತ್ರ ಬರೆದು ಕೃತ್ಯಜ್ಞತೆ ಸಲ್ಲಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಕಳೆದ 13 ದಿನಗಳು ಇಲ್ಲಿ ನನಗೆ ಮನೆಯಂತೆ ಭಾಸವಾಯಿತು. ನೀವು ನನ್ನ ಕುಟುಂಬಕ್ಕಿಂತ ಕಡಿಮೆಯಿಲ್ಲದಂತೆ ನನ್ನನ್ನು ನೋಡಿಕೊಂಡಿದ್ದೀರಿ. ನನ್ನ ಕಷ್ಟದ ಸಮಯದಲ್ಲಿ, ನೀವು ನನ್ನ ಪಕ್ಕದಲ್ಲಿ ನಿಂತು, ಬೆಂಬಲ ಮತ್ತು ಕಾಳಜಿ ತೋರಿಸಿದ್ದೀರಿ. ನಿಮ್ಮ ದಯೆ, ತಾಳ್ಮೆ ಮತ್ತು ಸಮರ್ಪಣೆ ಹೃದಯಸ್ಪರ್ಶಿಯಾಗಿತ್ತು ಎಂದು ಬರೆದಿದ್ದಾರೆ.

ನೀವು ಹಗಲಿರುಳು ನನ್ನೊಂದಿಗೆ ಇದ್ದು ನಾನು ಚೇತರಿಸಲು ಕಾರಣರಾಗಿದ್ದೀರಿ ಮತ್ತು ಧೈರ್ಯ ಕಳೆದುಕೊಳ್ಳದಂತೆ ಪ್ರೇರೇಪಿಸಿದ್ದೀರಿ. ನಿಮ್ಮ ಪ್ರೋತ್ಸಾಹ ನನಗೆ ಶೀಘ್ರ ಗುಣಮುಖನಾಗಲು ಶಕ್ತಿ ನೀಡಿತು. ನಿಮ್ಮ ಸಹಾನುಭೂತಿ ಮತ್ತು ಪರಿಣತಿಗೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೇನೆ. ನಿಮ್ಮ ಎಲ್ಲ ಪ್ರಯತ್ನಗಳಲ್ಲಿ ಯಶ ಸಿಗಲಿ, ನಿಮಗೆ ಅತ್ಯಂತ ಉಜ್ವಲ ಭವಿಷ್ಯ ಮತ್ತು ಯಶಸ್ಸನ್ನು ಹಾರೈಸುತ್ತೇನೆ ಎಂದು ಬರೆದಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರು, ಸಿಎಲ್‌ಪಿ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದರು. ಈ ವೇಳೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಡ್ಡಬರುತ್ತಿದ್ದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. 

Tags:    

Similar News