Mysore MUDU Scam | ಸಿಎಂ ವಿರುದ್ಧ ಪ್ರಕರಣ: ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನು ಹೋರಾಟಕ್ಕೆ ನಿರ್ಧಾರ

ಉಪಾಹಾರ ಸಭೆಗೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಶಾಸಕರೂ ಆಗಿರುವ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೂ ಮುಖ್ಯಮಂತ್ರಿ ಆಹ್ವಾನ ನೀಡಿದ್ದು, ಅವರ ಉಪಸ್ಥಿತಿಯಲ್ಲಿ ಮುಡಾ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದರು.

Update: 2024-08-01 10:10 GMT
ಮುಖ್ಯಮಂತ್ರಿ ಸಿದ್ದರಾಮಯ್ಯ
Click the Play button to listen to article

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿದಲ್ಲಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ʼಕಾವೇರಿʼಯಲ್ಲಿ ಗುರುವಾರ ಬೆಳಿಗ್ಗೆ ನಡೆದ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗಿನ ಉಪಾಹಾರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಉಪಾಹಾರ ಸಭೆಗೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಶಾಸಕರೂ ಆಗಿರುವ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೂ ಮುಖ್ಯಮಂತ್ರಿ ಆಹ್ವಾನ ನೀಡಿದ್ದು, ಅವರ ಉಪಸ್ಥಿತಿಯಲ್ಲಿ ಮುಡಾ ಬೆಳವಣಿಗೆಗಳ ಕುರಿತು ಗಂಭೀರ ಸಮಾಲೋಚನೆ ನಡೆದಿದೆ.

ಮುಡಾ ವಿಚಾರದಲ್ಲಿ ರಾಜ್ಯಪಾಲರು ಉದ್ದೇಶಪೂರ್ವಕವಾಗಿ ಮುಖ್ಯಮಂತ್ರಿಗೆ ನೋಟಿಸ್ ನೀಡಿದ್ದಾರೆ. ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಈಗಾಗಲೇ ರಾಜ್ಯಪಾಲರಿಗೆ ನೀಡಲಾಗಿದೆ. ಆದರೂ ದುರುದ್ದೇಶಪೂರ್ವಕವಾಗಿ ಅವರು ನೋಟಿಸ್ ನೀಡಿದ್ದಾರೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಕಾನೂನು ಹೋರಾಟ ನಡೆಸುವುದೇ ಸೂಕ್ತ ಎಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯ ಮಾತಿಗೆ ಸಚಿವರು ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಬೇರೆ ರಾಜ್ಯಗಳಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜಭವನ ದುರ್ಬಳಕೆ ಆಗಿದೆ. ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿದೆ. ಕೇಂದ್ರದ ಈ ಯತ್ನವನ್ನು ವಿಫಲಗೊಳಿಸಲು ರಾಜಕೀಯವಾಗಿ ಜೊತೆಗೆ ಕಾನೂನಾತ್ಮಕವಾಗಿ ತೀವ್ರ ಹೋರಾಟ ನಡೆಸುವ ಕುರಿತು ಸಮಾಲೋಚನೆ ನಡೆದಿದೆ.

Tags:    

Similar News