ಜಾಮೀನು ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ ಸವಾಲು

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ?

Update: 2024-09-28 06:39 GMT

ಮೂಡಾ ಪ್ರಕರಣ ಸಂಬಂಧ ತಮ್ಮ ರಾಜೀನಾಮೆ ಕೇಳುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ, ಏಕೆಂದರೆ ಗಣಿ ಗುತ್ತಿಗೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರಿಗೆ ನೈತಿಕತೆ ಇದ್ದರೆ ಮೊದಲು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, 17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ . ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಪ್ರಶ್ನಿಸಿದರು. ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.

Tags:    

Similar News