ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ: ಕುಮಾರಸ್ವಾಮಿ

ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.;

Update: 2024-09-05 12:55 GMT
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
Click the Play button to listen to article

ಕೋವಿಡ್ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಂಪಣ್ಣ ಆಯೋಗದ ವರದಿಯನ್ನು ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು. ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾ‌ರ್ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕೋರ್ಟ್‌ನಲ್ಲಿ ಈ ಪ್ರಕರಣದ ಬಗ್ಗೆ ವಾದ, ಪ್ರತಿವಾದ ಆಗಿದೆ. ಸಿಎಂ ಪರ ವಕೀಲರು ವಾದ ಮಾಡಲು ಸಮಯ ಕೇಳುತ್ತಿದ್ದಾರೆ ಎಂದರು.

ಮುಡಾ ಹಿಂದಿನ ಆಯುಕ್ತ ದಿನೇಶ್​ ಕುಮಾರ್ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕೋರ್ಟ್​​ನಲ್ಲಿ ಈ ಪ್ರಕರಣದ ಬಗ್ಗೆ ವಾದ ಪ್ರತಿವಾದ ಆಗಿದೆ. ಸಿಎಂ ಪರ ವಕೀಲರು ವಾದ ಮಾಡಲು ಸಮಯ ಕೇಳುತ್ತಿದ್ದಾರೆ ಎಂದರು.

Tags:    

Similar News