Caste Census| ಅವರವರ ಸಮಾಜದ ನಿಲುವು ಪ್ರತಿಪಾದಿಸಲಿ, ಯಾರನ್ನೂ ನಾವು ಟೀಕೆ ಮಾಡುವುದಿಲ್ಲ- ಡಿಸಿಎಂ ಡಿ.ಕೆ.ಶಿವಕುಮಾರ್

ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ‌ಮಾಡಲು ಸಾಧ್ಯ" ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.;

Update: 2025-04-14 07:09 GMT

"ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿರುವುದನ್ನು ನಾವ್ಯಾಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರ ಅವರವರ ಸಮುದಾಯದ ನಿಲುವುಗಳನ್ನು ಪ್ರತಿಪಾದನೆ ಮಾಡಲಿ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಜಾತಿಗಣತಿ ಬಗ್ಗೆ ಶಾಮನೂರು ಶಿವಶಂಕರಪ್ಪ ಟೀಕೆ ಹಾಗೂ ವರದಿಯ ಅಧ್ಯಯನಕ್ಕೆ ವೀರಶೈವ ಮಹಾಸಭಾ ತಜ್ಞರ ಸಮಿತಿ ನೇಮಕ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.  ಇದಕ್ಕಿಂತ ಮುಕ್ತವಾಗಿ ಇನ್ನೇನು ‌ಮಾಡಲು ಸಾಧ್ಯ" ಎಂದು ಹೇಳಿದ್ದಾರೆ.

ಚುನಾವಣೆ ಪೂರ್ವದಲ್ಲಿ ಒಕ್ಕಲಿಗ ಸಮುದಾಯದ ಬೆನ್ನಿಗೆ ನಿಲ್ಲುವ ಕುರಿತು ನೀಡಿದ್ದ ಹೇಳಿಕೆ ಬಗ್ಗೆ ಕೇಳಿದಾಗ, "ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದೇನೆ. ಎಲ್ಲರಿಗೂ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ, ಧ್ವನಿ, ಧ್ಯೇಯ, ಉದ್ದೇಶ, ಸಂಕಲ್ಪ ಎಲ್ಲವೂ ಸಹ" ಎಂದಿದ್ದಾರೆ. 

ಧರ್ಮದ ಹೆಸರಲ್ಲಿ ರಾಜಕಾರಣ ನೀಚತನ

"ಬೆಂಗಳೂರು ಭಾವೈಕ್ಯತೆಯ ದೊಡ್ಡ ಸಂಕೇತ. ಕರಗ ಆಚರಣೆ ವೇಳೆ ದರ್ಗಾಕ್ಕೂ ಭೇಟಿ ನೀಡಲಾಗುತ್ತದೆ. ಧರ್ಮ, ದೇವಾಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡುವುದು ನೀಚತನ. ಇದನ್ನು ಯಾರೂ ಸಹ ಮಾಡಬಾರದು" ಎಂದು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. 

"ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ. ಅವರು ಯಾರಿಗೆ ಹಣ ನೀಡಬೇಕೋ ಅವರಿಗೆ ಹಣ ನೀಡುತ್ತಾರೆ. ಬಜೆಟ್ ನಲ್ಲಿಯೇ ಹಣ ಮೀಲಿಟ್ಟಿದ್ದೇವೆ. ಕರಗ ಉತ್ಸವ ಚೆನ್ನಾಗಿ ನಡೆಯಲು ಜಿಲ್ಲಾಧಿಕಾರಿಗಳು, ಪೊಲೀಸರು ಶ್ರಮವಹಿಸಿದ್ದಾರೆ" ಎಂದು ತಿಳಿಸಿದ್ದಾರೆ.

Tags:    

Similar News