RG Kar Hospital Rape Case | ಅತ್ಯಾಚಾರ ಅಪರಾಧಿಗೆ ಜೀವಾವಧಿ ಶಿಕ್ಷೆ

ಅತ್ಯಾಚಾರ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದೆ. ಮೃತ ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.;

Update: 2025-01-20 10:57 GMT
ಅಪರಾಧಿ ಸಂಜಯ್‌ ರಾಯ್‌

ಕೋಲ್ಕತ್ತಾದ ಆರ್ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ ಪ್ರಕರಣದ ಅಪರಾಧಿಗೆ ಸೋಮವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಇಲ್ಲಿನ ಸಿಯಾಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅನಿರ್ ಬಾನ್ ದಾಸ್ ಅವರು ಅತ್ಯಾಚಾರ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಜೊತೆಗೆ ಮೃತ ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿದ್ದಾರೆ.

ಪ್ರಕರಣದ ವಾದ- ವಿವಾದ ಆಲಿಸಿದ್ದ ನ್ಯಾಯಾಲಯ ಶನಿವಾರ ಆರೋಪಿ ಸಂಜಯ್ ರಾಯ್ ನನ್ನು ದೋಷಿ ಎಂದು ತೀರ್ಪು ನೀಡಿ, ಶಿಕ್ಷೆಯ ಪ್ರಮಾಣ ಕಾಯ್ದಿರಿಸಿತ್ತು.

ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೋರಿತ್ತು. 2024 ಆಗಸ್ಟ್ 9ರಂದು ಆರ್ಜಿ ಕರ್ ಆಸ್ಪತ್ರೆಯ ತರಬೇತಿ ನಿರತ ವೈದ್ಯೆಯ ಮೇಲೆ ಸಂಜಯ್ ರಾಯ್ ಅತ್ಯಾಚಾರ ನಡೆಸಿ, ಕೊಲೆಗೈದಿದ್ದ.

ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದರು. ಪಶ್ಚಿಮ ಬಂಗಾಳದಲ್ಲಿ ವೈದ್ಯರು ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದರು.

2024ರ ನವೆಂಬರ್ 12ರಂದು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಆರಂಭವಾಗಿತ್ತು. 57 ದಿನಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ ಶನಿವಾರ ಆರೋಪಿ ಸಂಜಯ್ ರಾಯ್ನನ್ನು ದೋಷಿ ಎಂದು ತೀರ್ಪು ನೀಡಿತ್ತು.

Tags:    

Similar News