ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಮದ್ಯದಂಗಡಿ ಮಾಲೀಕರಿಂದ ನ.20ರಂದು ಮದ್ಯ ಮಾರಾಟ ಬಂದ್‌

ಮದ್ಯದಂಗಡಿ ಸನ್ನದುದಾರರಿಂದ ಕೋಟ್ಯಂತರ ರೂ. ವಸೂಲಿ ಮಾಡುತ್ತಿದ್ದು, ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ಆರೋಪ ಮಾಡಿ ನ. 20ರಂದು ಮದ್ಯ ಮಾರಾಟ ಬಂದ್‌ ಗೆ ಕರೆ ನೀಡಲಾಗಿದೆ.;

Update: 2024-11-14 14:40 GMT

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಖಂಡಿಸಿ ನ.20 ರಂದು ಮದ್ಯ ಮಾರಾಟ ಬಂದ್ ಮಾಡಲು ಮದ್ಯದಂಗಡಿ ಮಾಲೀಕರು ತೀರ್ಮಾನಿಸಿದ್ದಾರೆ.

ಮದ್ಯದಂಗಡಿ ಸನ್ನದುದಾರರಿಂದ ಕೋಟ್ಯಂತರ ರೂ. ವಸೂಲಿ ಮಾಡುತ್ತಿದ್ದು, ಅಧಿಕಾರಿಗಳ ಲಂಚಗುಳಿತನದಿಂದ ನಕಲಿ ಮದ್ಯ ವ್ಯಾಪಾರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಗಳ ಬಂದ್‌ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ಮದ್ಯ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಅವರು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನ. 20ರಂದು ಕರ್ನಾಟಕದಾದ್ಯಂತ ಎಂಎಸ್ಐಎಲ್ ಮಳಿಗೆ ಹೊರತುಪಡಿಸಿ ಎಲ್ಲಾ ಬಾರ್‌ಗಳನ್ನು ಬಂದ್‌ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಹೆಚ್ಚಿರುವ ಅಕ್ರಮಗಳ ಕುರಿತು ಸರ್ಕಾರ ಗಮನ ಹರಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರು ಮದ್ಯದಂಗಡಿ ವ್ಯಾಪಾರಿಗಳ ಕುಂದುಕೊರತೆ ಆಲಿಸಬೇಕು. ನಾವು 500 ರಿಂದ 900 ಕೋಟಿ ರೂ. ಲಂಚದ ಪಡೆಯುವ ಬಗ್ಗೆ ಮಾತನಾಡಿಲ್ಲ. ಪ್ರಧಾನಿ ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿರಬೇಕು ಎಂದು ಹೇಳಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಸಿಎಲ್- 7 ಮದ್ಯದಂಗಡಿಗಳಿಗೆ ಬೇಕಾಬಿಟ್ಟಿ ಪರವಾನಗಿ ನೀಡಲಾಗುತ್ತಿದೆ. ನಾವು ನಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದೇವೆ. ಸರ್ಕಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಂಡರೆ ಒಳ್ಳೆಯದು ಎಂದಿದ್ದಾರೆ.

ಇನ್ನೊಂದೆಡೆ ಬೆಂಗಳೂರಿನ ವಿಧಾನಸೌಧದಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮದ್ಯ ಮಾರಾಟಗಾರರ ಸಂಘಗಳ ಒಕ್ಕೂಟದ ಮುಖಂಡರು ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಗುರುಸ್ವಾಮಿ ಅವರು, ಮದ್ಯ ಮಾರಾಟಗಾರರ ಸಂಘದ ಬೇಡಿಕೆಗಳ ಕುರಿತು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿಚಾರಗಳನ್ನೂ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿ ಹಾಗೂ ಸಹಾಯಕ ಮುಖ್ಯ ಕಾರ್ಯದರ್ಶಿ ಅವರ ಗಮನಕ್ಕೆ ತಂದಿದ್ದೇವೆ. ಸಿಎಂ ಅವರೊಂದಿಗೆ ಸಭೆ ಮಾಡಿ ತೀರ್ಮಾನಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರದ ಸಚಿವ ಆರ್‌.ಬಿ. ತಿಮ್ಮಾಪುರ ವಿರುದ್ಧ ತಿಂಗಳ ವಸೂಲಿಯ ಗಂಭೀರ ಸಹ ಕೇಳಿಬಂದಿತ್ತು. ಇದಕ್ಕೆ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿ, ನಮ್ಮ ಅವಧಿಯಲ್ಲಿ ಈಗಿರಲಿಲ್ಲ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಮದ್ಯ ಮಾರಟಗಾರರ ಸಂಘದ ಪದಾಧಿಕಾರಿಗಳು, ಈ ಹಿಂದಿನ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದ ನಾಗೇಶ್ ಹಾಗೂ ಅದಕ್ಕೂ ಹಿಂದಿನ ಎಲ್ಲಾ ಸಚಿವರ ಕಾಲಘಟ್ಟದಲ್ಲೂ ಲಂಚಾವತಾರ ನಡೆದೇ ಇದೆ. ಅದು ಮಿತಿ ಮೀರಿದೆ ಎಂಬ ದೂರಿದ್ದರು.

Tags:    

Similar News