ಲಾಕಪ್ ಡೆತ್ ಪ್ರಕರಣ: ಚನ್ನಪಟ್ಟಣ ಎಂಕೆ ದೊಡ್ಡಿ ಠಾಣೆಯ ನಾಲ್ವರು ಪೊಲೀಸರು ಅಮಾನತು
ಕಳ್ಳತನ ಆರೋಪದ ಮೇಲೆ ಬಂಧಿಸಲಾಗಿದ್ದ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್ (60) ಅವರು, ಆಗಸ್ಟ್ 20ರಂದು ಠಾಣೆಯ ಶೌಚಾಲಯದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಘಟನೆಯು ತೀವ್ರ ಚರ್ಚೆಗೆ ಕಾರಣವಾಗಿತ್ತು.;
By : The Federal
Update: 2025-08-24 04:26 GMT
ಸಾಂದರ್ಭಿಕ ಚಿತ್ರ
ಚನ್ನಪಟ್ಟಣ ತಾಲೂಕಿನ ಎಂಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಆರೋಪದ ಮೇಲೆ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಕಳ್ಳತನ ಆರೋಪದ ಮೇಲೆ ಬಂಧಿಸಲಾಗಿದ್ದ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್ (60) ಅವರು, ಆಗಸ್ಟ್ 20ರಂದು ಠಾಣೆಯ ಶೌಚಾಲಯದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಘಟನೆಯು ತೀವ್ರ ಚರ್ಚೆಗೆ ಕಾರಣವಾಗಿತ್ತು.
ಪ್ರಕರಣದ ಹಿನ್ನೆಲೆಯಲ್ಲಿ, ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರು, ಎಎಸ್ಐ ನಾಗರಾಜು ಹಾಗೂ ಕಾನ್ಸ್‌ಟೇಬಲ್‌ಗಳಾದ ಲಕ್ಷ್ಮಿನಾರಾಯಣ, ಪ್ರತಾಪ್ ಮತ್ತು ಸೋಮನಾಥ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.