ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು (ಮಂಗಳವಾರ) ಆರಂಭವಾಗಿದೆ. ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ, ಎರಡನೇ ಹಂತದ ಮತದಾನದಲ್ಲಿ ರಾಜ್ಯದಲ್ಲಿ ಈಗಾಗಲೇ 14 ಕ್ಷೇತ್ರಗಳ ಮತದಾನ ಮುಕ್ತಾಯವಾಗಿದೆ. ಇಂದು ಉಳಿದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶವಿದೆ. ಮತಗಟ್ಟೆಗಳಲ್ಲಿ ಮತದಾರರಿಗೆ ಚುನಾವಣಾ ಆಯೋಗ ಮೂಲಸೌಕರ್ಯ ಕಲ್ಪಿಸಿದೆ. ಬಿಸಿಲಿನ ಬೇಗೆಯಿಂದ ಮತದಾನ ಕಡಿಮೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತಗಟ್ಟೆಗಳಲ್ಲಿ ಕುಡಿಯಲು ನೀರು, ಕುಳಿತುಕೊಳ್ಳಲು ಕುರ್ಚಿ, ನೆರಳಿಗೆ ಶಾಮಿಯಾನ ಮತ್ತಿತರ ಸವಲತ್ತುಗಳನ್ನು ಕಲ್ಪಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಶ್ರೀರಾಮುಲು (ಬಳ್ಳಾರಿ), ಜಗದೀಶ್ ಶೆಟ್ಟರ್ (ಬೆಳಗಾವಿ), ಪ್ರಿಯಾಂಕ ಜಾರಕಿಹೊಳಿ (ಚಿಕ್ಕೋಡಿ), ವಿಶ್ವೇಶ್ವರ ಹೆಗಡೆ ಕಾಗೇರಿ (ಉತ್ತರ ಕನ್ನಡ), ಬಸವರಾಜ ಬೊಮ್ಮಾಯಿ (ಹಾವೇರಿ), ಬಿವೈ ರಾಘವೇಂದ್ರ (ಶಿವಮೊಗ್ಗ) ಕಣದಲ್ಲಿರುವ ಪ್ರಮುಖ ನಾಯಕರಾಗಿದ್ದಾರೆ.