Mysore MUDA scam | ಲೋಕಾಯುಕ್ತ ತನಿಖೆ ಚುರುಕು: ಇಬ್ಬರು ಆರೋಪಿಗಳ ವಿಚಾರಣೆ

ಮುಡಾ ಪ್ರಕರಣದ ತನಿಖೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ತನಿಖಾಧಿಕಾರಿಗಳ ತಂಡವು ಮುಡಾದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ, ದೃಢೀಕೃತ ಪ್ರತಿಗಳನ್ನು ಪಡೆದಿದೆ. ಮುಡಾದಲ್ಲಿ ಪಡೆದ ದಾಖಲೆಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸುತ್ತಿದೆ.

Update: 2024-10-10 11:05 GMT

ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ಬಾಮೈದ, ಪ್ರಕರಣದ ಮೂರನೇ ಆರೋಪಿಯಾದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ನಾಲ್ಕನೇ ಆರೋಪಿಯಾದ ಮೂಲ ಭೂ ಮಾಲೀಕ ಜೆ.ದೇವರಾಜು ಗುರುವಾರ ವಿಚಾರಣೆಗೆ ಹಾಜರಾದರು.

ಮೈಸೂರಿನ ಲೋಕಾಯುಕ್ತ ಪೊಲೀಸ್ ಕಚೇರಿಗೆ ಬಂದ ಈ ಇಬ್ಬರಿಂದ ಜಮೀನು ವ್ಯವಹಾರದ ಕುರಿತು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ್ ನೇತೃತ್ವದ ತಂಡ ವಿಚಾರಣೆ ನಡೆಸುತ್ತಿದೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮೂರು ಮತ್ತು ನಾಲ್ಕನೇ ಆರೋಪಿಗಳಿಗೆ ಲೋಕಾಯುಕ್ತ ಪೊಲೀಸರು ಬುಧವಾರ ನೋಟಿಸ್ ನೀಡಿದ್ದರು.

ಮುಡಾ ಪ್ರಕರಣದ ತನಿಖೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ತನಿಖಾಧಿಕಾರಿಗಳ ತಂಡವು ಮುಡಾದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ, ದೃಢೀಕೃತ ಪ್ರತಿಗಳನ್ನು ಪಡೆದಿದೆ. ಮುಡಾದಲ್ಲಿ ಪಡೆದ ದಾಖಲೆಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸುತ್ತಿದೆ. ಈಗಾಗಲೇ ಕೆಸರೆ ಗ್ರಾಮದ ಜಮೀನು ಹಾಗೂ ವಿಜಯನಗರದಲ್ಲಿ ಸಿಎಂ ಕುಟುಂಬಕ್ಕೆ ಹಂಚಿಕೆಯಾಗಿರುವ 14 ಬದಲಿ ನಿವೇಶನಗಳ ಸ್ಥಳ ಮಹಜರು ಪ್ರಕ್ರಿಯೆ ಮುಗಿದಿದೆ.

ಇನ್ನು ಪ್ರಕರಣದ ಮೊದಲ ಮತ್ತು ಎರಡನೇ ಆರೋಪಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಶೀಘ್ರ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Tags:    

Similar News