Lokayukta Raid | ಏಳು ಮಂದಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ; ದಾಖಲೆ ಪರಿಶೀಲನೆ
ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನ 12 ಕಡೆ, ತುಮಕೂರಿನ ಏಳು ಕಡೆ, ಬೆಂಗಳೂರು ಗ್ರಾಮಾಂತರದ ಜಿಲ್ಲೆಯ 8 ಕಡೆ, ಯಾದಗಿರಿ ಜಿಲ್ಲೆಯಲ್ಲಿ 5, ಮಂಗಳೂರಿನಲ್ಲಿ 4 ಹಾಗೂ ವಿಜಯಪುರ ಜಿಲ್ಲೆಯ 4 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.;
ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಳು ಮಂದಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ.
ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನ 12 ಕಡೆ, ತುಮಕೂರಿನ ಏಳು ಕಡೆ, ಬೆಂಗಳೂರು ಗ್ರಾಮಾಂತರದ ಜಿಲ್ಲೆಯ 8 ಕಡೆ, ಯಾದಗಿರಿ ಜಿಲ್ಲೆಯಲ್ಲಿ 5, ಮಂಗಳೂರಿನಲ್ಲಿ 4 ಹಾಗೂ ವಿಜಯಪುರ ಜಿಲ್ಲೆಯ 4 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಭ್ರಷ್ಟ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಯಾವ ಅಧಿಕಾರಿಗಳ ಮೇಲೆ ದಾಳಿ?
ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ಮಂಗಳೂರಿನ ಭೂ ಮಾಪನ ಇಲಾಖೆ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ.ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ರೇಣುಕಾ, ಬೆಂಗಳೂರಿನ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ಹೆಚ್ಚಿವರಿ ನಿರ್ದೇಶಕ ಟಿ.ವಿ.ಮುರುಳಿ,ಬೆಂಗಳೂರಿನ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಇನ್ಸ್‌ಪೆಕ್ಟರ್ ಹೆಚ್ಆರ್ ನಟರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಕಚೇರಿಯ ಎಸ್ ಡಿ ಎ ಅನಂತ ಕುಮಾರ್, ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಕಚೇರಿಯ ತಹಶೀಲ್ದಾರ್ ಉಮಾಕಾಂತ್ ಹಳ್ಳೆ ಅವರ ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ವಿಜಯಪುರ ನಗರದ ಸೆಂಟ್ ಜೋಸೆಫ್ ಶಾಲೆ ಹಿಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸ್.ಪಿ ಮಲ್ಲೇಶ್ ಟಿ ಹಾಗೂ ಇನ್ನೇ ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಲ್ಲದೇ ಸೊಲ್ಲಾಪುರ ನಗರದ ಕೆ.ಹೆಚ್.ಬಿ ಪ್ರದೇಶದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.