Mahakumbh Stampede | ಕುಂಭಮೇಳ ಕಾಲ್ತುಳಿತ: ಸಿಎಂ ಸಿದ್ದರಾಮಯ್ಯ ಸಂತಾಪ

ಘಟನೆಯಲ್ಲಿ ಗಾಯಗೊಂಡಿರುವ ರಾಜ್ಯದವರ ರಕ್ಷಣೆ ಮತ್ತು ಸುರಕ್ಷಿತವಾಗಿ ಕರೆತರಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.;

Update: 2025-01-29 08:17 GMT

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡದಲ್ಲಿ ಸಾವಿಗೀಡಾದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಘಟನೆಯ ಕುರಿತು ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ದುರಂತದಲ್ಲಿ ಸಾವಿಗೀಡಾದವರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೆ, ಘಟನೆಯಲ್ಲಿ ಗಾಯಗೊಂಡಿರುವ ರಾಜ್ಯದವರ ರಕ್ಷಣೆ ಮತ್ತು ಸುರಕ್ಷಿತವಾಗಿ ಕರೆತರಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

"ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ" ಎಂದು ಹಾರೈಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

"ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ" ಎಂದು ಅವರು ಕುಂಭಮೇಳದಲ್ಲಿ ಭಾಗಹಿಸಿರುವ ರಾಜ್ಯದ ಯಾತ್ರಿಗಳಿಗೆ ಕರೆ ನೀಡಿದ್ದಾರೆ.


Tags:    

Similar News