ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ
ಮಿಲಿಂದ್ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಸದ್ಯ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.;
By : The Federal
Update: 2025-07-28 06:02 GMT
ಮಲ್ಲಿಖಾರ್ಜುನ ಅವರ ಮನಗ ಸ್ಥಿತಿ ಗಂಭೀರವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಿಲಿಂದ್ ಖರ್ಗೆ ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
ಮಲ್ಲಿಕಾರ್ಜುನ ಖರ್ಗೆ ಅವರ ಐವರು ಮಕ್ಕಳಲ್ಲಿ (ಮೂವರು ಗಂಡು, ಇಬ್ಬರು ಹೆಣ್ಣು) ಒಬ್ಬರಾದ ಮಿಲಿಂದ್ ಖರ್ಗೆ ಅವರು ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದರು. ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿರುವ ಅವರು, ವಿದೇಶದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದರು. ರಾಜಕೀಯವಾಗಿ ಅಥವಾ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಮಿಲಿಂದ್, ತಮ್ಮ ವೃತ್ತಿಪರ ಜೀವನದಲ್ಲಿ ತೊಡಗಿಸಿಕೊಂಡಿದ್ದರು.