Namma Metro| ಮೆಟ್ರೋದಲ್ಲಿ ಯುವತಿಯರ ಪೋಟೋ ಸೆರೆ ಹಿಡಿದ ಯುವಕ ಪೊಲೀಸರ ವಶಕ್ಕೆ
ಡಿಸೆಂಬರ್ 25 ರಂದು ಮೆಜೆಸ್ಟಿಕ್ ನಿಂದ ಜೆಪಿನಗರದ ಕಡೆ ಹೊರಟಿದ್ದ ಮೆಟ್ರೋ ಟ್ರೈನಲ್ಲಿ ಮಹೇಶ್ ಹೆಸರಿನ ವಿಕೃತ ಕಾಮಿಯೊಬ್ಬ ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿದ ಯುವತಿಯೋರ್ವಳು ಆತನೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾಳೆ.;
ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ಕಾಮುಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಯನಗರದಲ್ಲಿ ನಡೆದಿದೆ.
ಡಿಸೆಂಬರ್ 25 ರಂದು ಮೆಜೆಸ್ಟಿಕ್ ನಿಂದ ಜೆಪಿನಗರದ ಕಡೆ ಹೊರಟಿದ್ದ ಮೆಟ್ರೋ ಟ್ರೈನಲ್ಲಿ ಮಹೇಶ್ ಹೆಸರಿನ ವಿಕೃತ ಕಾಮಿಯೊಬ್ಬ ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿದ ಯುವತಿಯೋರ್ವಳು ಆತನೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾಳೆ. ಈ ವೇಳೆ ನೈಟ್ ಡ್ಯೂಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರು ಸೆಕ್ಯೂರಿಟಿಗಳು ಯುವತಿಯ ಸಹಾಯಕ್ಕೆ ಧಾವಿಸಿದ್ದಾರೆ. ಈ ವೇಳೆ ಮಹೇಶ್‍ನ ಕೃತ್ಯ ಬೆಳಕಿಗೆ ಬಂದಿದೆ.
ಜಯನಗರ ಮೆಟ್ರೋ ಸ್ಟೇಷನ್‍ನಲ್ಲಿ ಯುವಕನನ್ನು ರೈಲಿನಿಂದ ಕೆಳಗಿಳಿಸಿ, ಆತನನ್ನು ಜಯನಗರ ಪೊಲೀಸ ವಶಕ್ಕೆ ನೀಡಲಾಗಿದೆ. ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಆರೋಪಿಯ ಮೊಬೈಲ್‍ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಆತನಿಂದ ಕ್ಷಮಾಪಣಾ ಪತ್ರ ಬರೆಸಿ ಬಿಟ್ಟು ಕಳುಹಿಸಿದ್ದಾರೆ. ಮೆಟ್ರೋ ಅಧಿಕಾರಿಗಳು 5 ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ.