ನಿಂದನೆ ಪ್ರಕರಣ | ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ಪೊಲೀಸ್‌ ವಶಕ್ಕೆ

ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವ ಘಟನೆ ಇಂದು ನಡೆದಿದೆ.

Update: 2024-03-27 08:40 GMT
ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ
Click the Play button to listen to article

ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವ ಘಟನೆ ಬುಧವಾರ(ಮಾ. 27) ನಡೆದಿದೆ.

ಅಶೋಕ್ ಖೇಣಿಗೆ ನಿಂದಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದ ಬಳಿಕ ಪೊಲೀಸರು ಶಾಸಕರನ್ನು ವಶಕ್ಕೆ ಪಡೆದಿದ್ದರು.

ರವಿ ಗಣಿಗ ಅವರು ಮಾಜಿ ಪ್ರಧಾನಿ ದೇವೇಗೌಡರ ಬೆಂಬಲಿಗರಾಗಿದ್ದಾಗ ಅಶೋಕ್ ಖೇಣಿಗೆ ನಿಂದಿಸಿದ ಪ್ರಕರಣ ಇದಾಗಿದ್ದು, ಹಲವು ಬಾರಿ ವಿಚಾರಣೆಗೆ ಗೈರಾಗಿ ಇಂದು ಕೋರ್ಟ್‌ಗೆ ಹಾಜರಾಗಿದ್ದರು. ಈ ವೇಳೆ ಜನಪ್ರತಿನಿಧಿಗಳ ಕೋರ್ಟ್ ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚಿಸಿತ್ತು.

ನೈಸ್ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ಒಂದರಲ್ಲಿ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು. ಇಂದು ಶಾಸಕ ಗಣಿಗ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ವಶಕ್ಕೆ ಪಡೆಯಲು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಸೂಚಿಸಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ಬಳಿಕ ಕಳುಹಿಸಿ ಕೊಡಲಾಗಿದೆ.

ಕೋರ್ಟ್ ನಿಂದ ಹೊರಬಂದ ಬಳಿಕ ಮಾತನಾಡಿದ ಶಾಸಕ ರವಿ ಗಣಿಗ, ಫೈಲ್‌ ನೋಡಿ 5 ನಿಮಿಷ ಕುಳಿತುಕೊಳ್ಳಿ ಎಂದು ನ್ಯಾಯಾಧೀಶರು ಹೇಳಿದರು. ಹೀಗಾಗಿ ಹೊರಗಡೆ ಕುಳಿತಿದ್ದೆ. ಇದರಿಂದ ಬಂಧನ ಸುದ್ದಿ ಹರಡಿದೆ. ಮುಂದಿನ ತಿಂಗಳು 15ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Tags:    

Similar News