ಮಂಡ್ಯ ಹೆಣ್ಣು ಭ್ರೂಣ ಹತ್ಯೆ | ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರು ಮಂದಿ ಬಂಧನ

ಮಂಡ್ಯ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Update: 2024-09-11 06:39 GMT
ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಟಿ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Click the Play button to listen to article

ಮಂಡ್ಯ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಟಿ ಮನೆ, ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ  6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಒಂದು ಹೆಣ್ಣು ಭ್ರೂಣ ಹತ್ಯೆಗೆ 10 ಸಾವಿರದಿಂದ 50 ಸಾವಿರದವರೆಗೂ ಚಾರ್ಜ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಆಕ್ಟೀವ್ ಆಗಿದ್ದ ಈ ತಂಡ, ಕಳೆದ ಹಲವು ವರ್ಷಗಳಿಂದ ಈ ದಂಧೆ ನಡೆಸುತ್ತಿತ್ತು. ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಪಟೇಲ್, ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬಾರ್, ಕೆ.ಆರ್. ನಗರದ ಶಂಕರ್ ಬಂಧಿತ ಆರೋಪಿಗಳು. ಬಂಧಿತರಿಂದ ಸ್ಕ್ಸಾನಿಂಗ್ ಮಶೀನ್, ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೂ 50ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ಮಾಡಿರುವುದು ಬಯಲಾಗಿದೆ.

ಆಸ್ಪತ್ರೆಗೆ ಸೋನೋಗ್ರಫಿ ಟೆಸ್ಟ್ ಮಾಡಿಸಿಕೊಳ್ಳಲು ಬರುವವರನ್ನೇ ಈ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ವಾರದ ಹಿಂದೆ ಕಿಂಗ್ ಪಿನ್ ಅಭಿಷೇಕ್ ಹಾಗೂ ವಿರೇಶ್ ಸೇರಿ 12 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಮತ್ತೆ 6 ಜನರನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ 6 ಜನರನ್ನು ಬಂಧಿಸಲಾಗಿದೆ.

ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿದೆ. ಪ್ರಕರಣದಲ್ಲಿ ಕೆಲ ವೈದ್ಯರೂ ಭಾಗಿಯಾಗಿದ್ದಾರೆ. ಅವರ ಬಂಧನಕ್ಕೂ ಖಾಕಿ ಮುಂದಾಗಿದೆ. ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಹಿನ್ನೆಲೆ

ಕಳೆದ ವರ್ಷ ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ ಹಲವು ಮಂದಿಯನ್ನ ಬಂಧಿಸಿದ್ದರು.

ಆನಂತರ ಈ ಪ್ರಕರಣವನ್ನು ಸಿಐಡಿಗೂ ವಹಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ತಲೆ ಮರೆಸಿಕೊಂಡಿದ್ದ. ಆನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲೆಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಕರಾಳದಂಧೆ ಬೇಧಿಸಿ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. 

ಆದರೆ ಐದು ಪ್ರಕರಣಗಳಲ್ಲಿ ಸಿಐಡಿ ಪೊಲೀಸರು ಸೇರಿದಂತೆ ಮಂಡ್ಯ ಜಿಲ್ಲೆಯ ಪೊಲೀಸರಿಗೆ ಚಳ್ಳೆಯನ್ನು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ಕರಾಳದಂಧೆಯನ್ನು ಮುಂದುವರಿಸಿಕೊಂಡು ಹೋಗಿದ್ದ. ಈತನ ಬಂಧನಕ್ಕಾಗಿಯೇ ಏಳು ತಂಡಗಳನ್ನು ರಚನೆ ಮಾಡಲಾಗಿತ್ತು. ಕೊನೆಗೂ ಅಭಿಷೇಕ್ ಬಂಧನವಾಗಿದೆ.

Tags:    

Similar News