Manday Violence | ಮಂಡ್ಯ ಗಲಭೆಯ ಕುರಿತು ಸಿ.ಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Update: 2024-09-12 10:03 GMT
ಮುಖ್ಯಮಂತ್ರಿ ಸಿದ್ದರಾಮಯ್ಯ
Click the Play button to listen to article

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಈ ಬಗ್ಗೆ ಮುಖ್ಯಮಂತ್ರಿಗಳ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ  ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. 

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. 

Tags:    

Similar News