Mandya Violence | ನಾಗಮಂಗಲ ಗಣಪತಿ ಗಲಾಟೆ: ದೂರು ನೀಡಿದ್ದ ಅಧಿಕಾರಿಯೇ ಅಮಾನತು

ನಾಗಮಂಗಲ ಕೋಮುಗಲಭೆ ಬಳಿಕ ದೂರು ನೀಡಿದ್ದ ನಾಗಮಂಗಲ ಟೌನ್ ಠಾಣೆ ಪಿಎಸ್​ಐ ಬಿ.ಜೆ.ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶ ಹೊರಡಿಸಿದ್ದಾರೆ.;

Update: 2024-10-08 07:02 GMT
ನಾಗಮಂಗಲ ಟೌನ್ ಠಾಣೆ ಪಿಎಸ್​ಐ ಬಿ.ಜೆ.ರವಿ
Click the Play button to listen to article

 ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಬಗ್ಗೆ ದೂರು ನೀಡಿದ್ದ ಅಧಿಕಾರಿಯನ್ನೇ ಅಮಾನತು ಮಾಡಲಾಗಿದೆ.

ನಾಗಮಂಗಲ ಕೋಮುಗಲಭೆ ಬಳಿಕ ದೂರು ನೀಡಿದ್ದ ನಾಗಮಂಗಲ ಟೌನ್ ಠಾಣೆ ಪಿಎಸ್​ಐ ಬಿ.ಜೆ.ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ ಮಾಡುತ್ತಿದ್ದವರ ಪ್ರಚೋದನೆಯಿಂದ ಗಲಭೆ ಸೃಷ್ಷಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪಿಎಸ್ಐ ರವಿ ಅವರನ್ನು ಅಮಾನತು ಮಾಡಲಾಗಿದೆ. ಪಿಎಸ್ಐ ಬಿಜೆ ರವಿ ಜೊತೆಗೆ ಪೊಲೀಸ್​ ಪೇದೆ​ ರಮೇಶ್ ಅವರನ್ನೂ ಅಮಾನತು ಮಾಡಲಾಗಿದೆ.

ಈ ಹಿಂದೆ ಡಿವೈಎಸ್​ಪಿ ಸುಮಿತ್, ಪಿಐ ಅಶೋಕ್ ಅಮಾನತು ಆಗಿದ್ದರು. ಇದೀಗ ಮತ್ತಿಬ್ಬರನ್ನು ಅಮಾನತು ಮಾಡಿ ಎಸ್​ಪಿ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ದರ್ಗಾ ಬಳಿ ಮೆರವಣಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎರಡು ಸಮುದಾಯದ ಗುಂಪುಗಳ ನಡೆದ ಮಾತಿನ ಚಕಮಕಿ ಗಲಭೆಗೆ ತಿರುಗಿತ್ತು. ಈ ಗಲಭೆಯಲ್ಲಿ 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಲಾಗಿತ್ತು. ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪಿಎಸ್​ಐ ರವಿ ಸೇರಿದಂತೆ ಹಲವು ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ದಾಳಿ ಮಾಡಿದ್ದರು. ರಿಸರ್ವ್ ಸಿಬ್ಬಂದಿ ಊಟ ಮುಗಿಸಿ ಬರುವಷ್ಟರಲ್ಲಿ ಪರಿಸ್ಥಿತಿ ಕೈಮೀರಿತ್ತು. ಕಲ್ಲು, ದೊಣ್ಣೆ, ಮಾರಕಾಸ್ತ್ರ, ಪೆಟ್ರೋಲ್ ಬಾಂಬ್ ಎಸೆಯುವ ಜೊತೆಗೆ ‌ಅಂಗಡಿ ಮುಂಗಟ್ಟಿಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆಯಲಾಗಿತ್ತು. ಹೀಗಾಗಿ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗೃಹ ಇಲಾಖೆ ಅಮಾನತು ಮಾಡಿತ್ತು.

Tags:    

Similar News