Mysore MUDA Scam | ಹೈಕೋರ್ಟ್ ಆದೇಶ ಲೋಪ: ಮೇಲ್ಮನವಿ ಬಗ್ಗೆ ಚರ್ಚೆ- ಪೊನ್ನಣ್ಣ
'ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶದಲ್ಲಿ ಹಲವು ಲೋಪಗಳಿವೆ. ಆ ತೀರ್ಪಿನಲ್ಲಿ ನ್ಯಾಯಿಕ ಗ್ರಹಿಕೆ ಸಮಂಜಸವಾಗಿಲ್ಲ ಎಂದು ಮೇಲ್ಮನವಿ ಸಲ್ಲಿಸುವ ಬಗ್ಗೆ ಚರ್ಚಿಸಲಾಗುತ್ತಿದೆ' ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು.;
'ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶದಲ್ಲಿ ಹಲವು ಲೋಪಗಳಿವೆ. ಆ ತೀರ್ಪಿನಲ್ಲಿ ನ್ಯಾಯಿಕ ಗ್ರಹಿಕೆ ಸಮಂಜಸವಾಗಿಲ್ಲ ಎಂದು ಮೇಲ್ಮನವಿ ಸಲ್ಲಿಸುವ ಬಗ್ಗೆ ಚರ್ಚಿಸಲಾಗುತ್ತಿದೆ' ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು.
ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಫ್ಟಿ ಜತೆ ಚರ್ಚಿಸಲು ದೆಹಲಿಗೆ ತೆರಳಿರುವ ಅವರು, 'ರಾಜ್ಯಪಾಲರು ತನಿಖೆಗೆ ಅನುಮತಿ ನೀಡುವಲ್ಲಿ ನ್ಯಾಯಿಕ ಗ್ರಹಿಕೆ ಸರಿಯಾಗಿಲ್ಲ ಎಂದೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ವಾಸ್ತವಾಂಶ, ಕಾರಣ ಮತ್ತು ಅಂತಿಮ ನಿರ್ಧಾರವು ಪರಸ್ಪರ ಹೊಂದಿಕೆಯಾಗಬೇಕು. ಇವುಗಳಲ್ಲಿ ಯಾವೊಂದು ಕೊಂಡಿ ಇಲ್ಲವಾದರೂ, ನ್ಯಾಯಿಕ ಗ್ರಹಿಕೆ ಇಲ್ಲವಾಗುತ್ತದೆ. ನ್ಯಾಯಾಂಗಕ್ಕೂ ಇದು ಅನ್ವಯವಾಗುತ್ತದೆ. ಇದೇ ಆಧಾರದಲ್ಲಿ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಹೈಕೋರ್ಟ್‌ನ ತೀರ್ಪಿನಲ್ಲಿ ಇಂತಹ ಹಲವು ಲೋಪಗಳಿವೆ. ಅವುಗಳನ್ನು ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
'ಹೈಕೋರ್ಟ್‌ನ ತೀರ್ಪಿನಲ್ಲಿ ಇಂತಹ ಹಲವು ಲೋಪಗಳಿವೆ. ಅವುಗಳನ್ನು ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಈ ಸಂಬಂಧ ಅಭಿಷೇಕ್ ಮನು ಸಿಂಫ್ಟಿ ಅವರ ಜತೆ ಈಗಾಗಲೇ ಚರ್ಚಿಸಲಾಗಿದೆ. ಎಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಿ, ಮುಂದಿನ ನಡೆ ನಿರ್ಧರಿಸೋಣ ಎಂದು ಅವರು ಹೇಳಿದ್ದಾರೆ. ಅವರ ಸಲಹೆಗಾಗಿ ಕಾಯುತ್ತಿದ್ದೇವೆ' ಎಂದು ಅವರು ಹೇಳಿದ್ದಾರೆ.