ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದಲ್ಲಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಶವಗಳನ್ನು ಹುಡುಕುವ ಕಾರ್ಯ ಆರಂಭಿಸಿ ಅಗೆಯಲಾಗುತ್ತಿದೆ. ಅಪರಿಚಿತ ವ್ಯಕ್ತಿ ಶವಗಳನ್ನು ಹೂತಿಟ್ಟಿರುವ ಸ್ಥಳಗಳನ್ನು ಗುರುತಿಸಿದ್ದು, ಸುಮಾರು 13 ಸ್ಥಳಗಳನ್ನು ಪತ್ತೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿ ತೋರಿಸಿರುವ ಸ್ಥಳಗಳನ್ನು ಗುರುತಿಸಿ ಶವಗಳನ್ನು ಹೊರತೆಗೆಯುವ ಕೆಲಸ ಪ್ರಾರಂಭಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ. ಅಲ್ಲದೇ ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು, ಅವರ ಸಮಕ್ಷಮದಲ್ಲಿ ಅಗೆಯುವ ಕೆಲಸ ನಡೆಸಲಾಗುತ್ತಿದೆ ಎನ್ನಲಾಗಿದೆ. ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಮೊದಲು ಶವಗಳನ್ನು ಹೊರ ತೆಗೆಯುವ ಕೆಲಸ ನಡೆಸಲಾಗುತ್ತಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯ ನಡೆಸಲಾಗುತ್ತಿದೆ. ಶವಗಳನ್ನು ಹೊರತೆಗೆಯುವ ಕಾರ್ಯಕ್ಕೆ 10ಕ್ಕೂ ಹೆಚ್ಚುಕಾರ್ಮಿಕರನ್ನು ನಿಯೋಜನೆ ಮಾಡಿಕೊಳ್ಳಲಾಗಿದ್ದು, ಧರ್ಮಸ್ಥಳದ ಗ್ರಾಮಪಂಚಾಯಿತಿ ಕಾರ್ಮಿಕರು ಅಗೆಯುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ. ಶವಗಳನ್ನು ಹೂತಿಟ್ಟಿರುವ ಸ್ಥಳಗಳನ್ನು ಗುರುತಿಸಿರುವ ಪೊಲೀಸರು ಅಪರಿಚಿತ ವ್ಯಕ್ತಿಯ ಹೇಳಿರುವ ಸ್ಥಳಗಳಿಗೆ ಎಸ್ಐಟಿ ವಿಶೇಷ ಭದ್ರತೆ ಕಲ್ಪಿಸಿದೆ. ಗುರುತಿಸಿದ ಪ್ರತಿ ಸ್ಥಳಕ್ಕೂ ತಲಾ ಇಬ್ಬರನ್ನು ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ದಟ್ಟ ಅರಣ್ಯದಲ್ಲಿ ಸರ್ಪಗಾವಲು ಹಾಕಲಾಗಿದೆ. ಗುರುತಿಸಿದ ಜಾಗಗಳಿಗೆ ನಂಬರ್ ನೀಡಲಾಗಿದೆ. ಒಂದೆಡೆ ಅಗೆಯುವ ಕೆಲಸ ನಡೆಯುತ್ತಿದ್ದರೆ, ಉಳಿದಿರುವ ಜಾಗಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವ ಬಗ್ಗೆ ಅಪರಿಚಿತ ವ್ಯಕ್ತಿ ಹೇಳಿಕೆ ನೀಡಿದ ಬಳಿಕ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಸರ್ಕಾರವು ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖೆ ತಂಡ ರಚಿಸಲಾಗಿದೆ. ಧರ್ಮಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.