The Federal Exclusive : ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ
The Federal Exclusive : ಶಿವಾನಂದ ಪಾಟೀಲ್ ಅವರು ಪ್ರಸ್ತುತ ಕರ್ನಾಟಕ ಸರ್ಕಾರದಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಮತ್ತು ಸಕ್ಕರೆ ನಿರ್ದೇಶನಾಲಯದ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು;
ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಸಚಿವ ಶಿವಾನಂದ ಸಿದ್ದರಾಮಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಾಕಿರುವ ಸವಾಲಿಗೆ ಉತ್ತರವಾಗಿ ಅವರು ರಾಜೀನಾಮೆ ಸಲ್ಲಿದ್ದಾರೆ ಎಂದು ದ ಫೆಡರಲ್ ಕರ್ನಾಟಕದ ಜತೆ ಮಾತನಾಡುತ್ತಾ ಹೇಳಿದ್ದಾರೆ.
ಶಿವಾನಂದ ಪಾಟೀಲ್ ಅವರು ಪ್ರಸ್ತುತ ಕರ್ನಾಟಕ ಸರ್ಕಾರದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶಿವಾನಂದ ಪಾಟೀಲ ಅವರು ರಾಜೀನಾಮೆ ನೀಡುತ್ತಿರುವುದು
ಅವರು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಸವನ ಬಾಗೇವಾಡಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದಿದ್ದರು.
ಶಿವಾನಂದ ಪಾಟೀಲ್ ಅವರು ವಿಜಯಪುರ ಮೂಲದ ರಾಜಕಾರಣಿ. 2018 ಮತ್ತು 2023ರ ಚುನಾವಣೆಗಳಲ್ಲಿ ಬಸವನ ಬಾಗೇವಾಡಿಯಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದರು. ಅವರು 2018ರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು ಮತ್ತು ಪ್ರಸ್ತುತ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಹೊಂದಿದ್ದಾರೆ.
ಕಾರಣವೇನು?
ಇತ್ತೀಚೆಗೆ ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಪ್ರತಿಭಟನೆ ನಡೆಸಲಾಗಿತ್ತು. ಅದಕ್ಕೆ ಪ್ರತಿಯಾಗಿ ಬಸನಗೌಡ ಪಾಟೀಲ್ ಅವರು ಶಿವಾನಂದ ಪಾಟೀಲ್ ಅವರಿಗೆ ಅಪ್ಪನಿಗೆ ಹುಟ್ಟಿದರೆ, ರಾಜೀನಾಮೆ ಕೊಟ್ಟು ನನ್ನ ವಿರುದ್ಧ ಸ್ಪರ್ಧಿಸಿ ಎಂದು ಸವಾಲು ಹಾಕಿದ್ದರು. ಅದನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ.