ಮಗುವಿಗೆ ಜನ್ಮ ನೀಡಿದ ಬಾಲಕಿ;ಅಪ್ರಾಪ್ತ ಸೋದರನ ವಿರುದ್ಧವೇ ಪ್ರಕರಣ ದಾಖಲು
ಆ.29ರಂದು ಸಂಜೆ ಮನೆಯಲ್ಲೇ ಬಾಲಕಿಯು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಹಾಗೂ ಮಗು ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯವಾಗಿದ್ದಾರೆ. ಬಾಲಕಿ ಹಾಗೂ ಮಗುವನ್ನು ಮಕ್ಕಳ ರಕ್ಷಣಾ ಸಮಿತಿ ನಿಗಾದಲ್ಲಿ ಇರಿಸಲಾಗಿದೆ.;
ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆಕೆಯ ಸಹೋದರನೇ ಜನ್ಮದಾತ ಎಂಬ ಆತಂಕಕಾರಿ ವಿಚಾರ ಬಯಲಾಗಿದೆ.
ಅಪ್ರಾಪ್ತ ಬಾಲಕಿಯ ವಿಚಾರಣೆ ವೇಳೆ ಈ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ ವಿಷಯ ತಿಳಿಯುತ್ತಿದ್ದಂತೆ ದೌಡಾಯಿಸಿದ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಬಾಲಕಿಯನ್ನು ವಿಚಾರಣೆ ನಡೆಸಿದ್ದರು. ಆರಂಭದಲ್ಲಿ ಬಾಲಕಿಯು ಗೊಂದಲಕಾರಿ ಹೇಳಿಕೆ ನೀಡಿದ್ದಳು. ಆಕೆಗೆ ಕೌನ್ಸೆಲಿಂಗ್ ನೀಡಿದ ಬಳಿಕ ತನ್ನ ಸಹೋದರನೇ ಕಾರಣ ಎಂಬುದನ್ನು ಒಪ್ಪಿಕೊಂಡಿದ್ದಾಳೆ ಎಂದು ಮಕ್ಕಳ ಸಹಾಯವಾಣಿಯ ಮೂಲಗಳು ತಿಳಿಸಿವೆ. ಹೇಳಿರುವುದು ಗಾಬರಿ ಹುಟ್ಟಿಸಿದೆ.
ಬಾಲಕಿಯ ಸಹೋದರ ಕೂಡ ಅಪ್ರಾಪ್ತನಾಗಿದ್ದು, ತನ್ನ ತಂಗಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಬಾಲಕಿಯು ಶೇ 10 ರಷ್ಟು ಅಸಹಜ ಬೆಳವಣಿಗೆ ಹೊಂದಿದ್ದಳು ಎಂದು ಮಕ್ಕಳ ಸಹಾಯವಾಣಿ ಅಧಿಕಾರಿಯೊಬ್ಬರು ʼದ ಫೆಡರಲ್ ಕರ್ನಾಟಕʼಕ್ಕೆ ತಿಳಿಸಿದ್ದಾರೆ.
ಬಾಲಕಿಯ ಪೋಷಕರು ಬಡವರಾಗಿದ್ದು, ಗಂಡ-ಹೆಂಡತಿ ಇಬ್ಬರೂ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. 18 ವರ್ಷ ಪ್ರಾಯದ ಸಹೋದರ ತನ್ನ 14ವರ್ಷದ ಸಹೋದರಿಯನ್ನೇ ಲೈಂಗಿಕವಾಗಿ ಬಳಸಿಕೊಂಡಿದ್ದ. ಪ್ರಕರಣ ಬೆಳಕಿಗೆ ಬಂದ ನಂತರ ಆತನ ವಿರುದ್ಧ ಪೋಕ್ಸೋ ಕಾಯ್ದೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಾಲಕಿಯು ಕಳೆದ ಎರಡು ದಿನಗಳಿಂದ ಹೊಟ್ಟೆನೋವಿನ ಕಾರಣ ಶಾಲೆಗೆ ರಜೆ ಹಾಕಿದ್ದಳು. ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯನ್ನೂ ಕೊಡಿಸಿದ್ದರು. ಆ.29ರಂದು ಸಂಜೆ ಮನೆಯಲ್ಲೇ ಬಾಲಕಿಯು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಬಾಲಕಿ ಹಾಗೂ ಮಗು ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯವಾಗಿದ್ದಾರೆ. ಬಾಲಕಿ ಹಾಗೂ ಮಗುವನ್ನು ಮಕ್ಕಳ ರಕ್ಷಣಾ ಸಮಿತಿ ನಿಗಾದಲ್ಲಿ ಇರಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಯಾದಗಿರಿಯ ಜಿಲ್ಲೆಯ ವಸತಿ ಶಾಲೆಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಪ್ರಕರಣ ಸಂಬಂಧ ಶಾಲೆಯ ಪ್ರಾಂಶುಪಾಲರು ಸೇರಿ ನಾಲ್ವರನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ಘಟನೆಗೆ ಕಾರಣನಾದ ಪ್ರಮುಖ ಆರೋಪಿ ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ ಎಂಬಾತನನ್ನು ಶಹಾಪುರ ಪೊಲೀಸರು ಬಂಧಿಸಿದ್ದರು.