200ಕ್ಕು ಹೆಚ್ಚು ಅಕ್ರಮ ವಲಸಿಗರ ಗಡಿಪಾರು: ಜಿ.ಪರಮೇಶ್ವರ

ಅಕ್ರಮ ನುಸುಳುಕೋರರ ಬಗ್ಗೆ ಮೃದು ದೋರಣೆ ತೋರಲು ಏನು ಉಪಯೋಗ ಇದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಓಟ್ ಹಾಕಿಸಿಕೊಳ್ಳುವಂತ ಪರಿಸ್ಥಿತಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.;

Update: 2025-07-07 08:53 GMT

ಜಿ.ಪರಮೇಶ್ವರ್‌

ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕ್ರಿಯೆ ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ 200ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಪರಮೇಶ್ವರ ಹೇಳಿದ್ದಾರೆ. ವಿದೇಶಿ ಪ್ರಾದೇಶಿಕ ನೋಂದಣಿ ಅಧಿಕಾರಿಗಳು (FRRO) ಅಕ್ರಮ ವಲಸಿಗರನ್ನು ಗುರುತಿಸಿ ಸರ್ಕಾರಕ್ಕೆ ಮಾಹಿತಿ ನೀಡುತ್ತಾರೆ. ಈ ಮಾಹಿತಿ ಆಧರಿಸಿ ಗಡಿಪಾರು ಮಾಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದರು.

"ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ (ಅಕ್ರಮ ವಲಸಿಗರು) ಇದ್ದಾರೆ ಎಂದು ಯಾರೋ ಹೇಳುತ್ತಾರೆ. ಅದನ್ನು ಪರಿಶೀಲಿಸಿ, ಅಂತವರು ಕಂಡುಬಂದರೆ ಕಸ್ಟಡಿಗೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ. ಅಕ್ರಮ ನುಸುಳುಕೋರರ ಬಗ್ಗೆ ಮೃದು ದೋರಣೆ ತೋರಲು ಏನು ಉಪಯೋಗ ಇದೆ?" ಎಂದು ಅವರು ಪ್ರಶ್ನಿಸಿದರು. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ವೋಟ್ ಹಾಕಿಸಿಕೊಳ್ಳುವಂತಹ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ ಎಂದು ಒಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಸುರ್ಜೇವಾಲಾ ಭೇಟಿ ಮತ್ತು ಇತರೆ ವಿಷಯಗಳ ಕುರಿತು

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಳೆದ ವಾರ ತನ್ನನ್ನು ಭೇಟಿಗೆ ಕರೆದಿದ್ದರು. ಆದರೆ, ಆ ಸಮಯದಲ್ಲಿ ಊರಲ್ಲಿ ಇದ್ದ ಕಾರಣ ಭೇಟಿಯಾಗಲು ಸಾಧ್ಯವಾಗಿರಲಿಲ್ಲ ಎಂದು ಪರಮೇಶ್ವರ ತಿಳಿಸಿದರು. ಮತ್ತೆ ಕರೆದರೆ ಭೇಟಿಯಾಗುವುದಾಗಿ ಅವರು ಹೇಳಿದ್ದಾರೆ.

ರಂಭಾಪುರಿ ಶ್ರೀಗಳ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, "ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ?" ಎಂದು ಮರುಪ್ರಶ್ನಿಸಿದರು.

ಇನ್ನು, ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದ ಬಗ್ಗೆ ಮಾತನಾಡಿದ ಪರಮೇಶ್ವರ, ಆರೋಪಿತರು ಈಗಾಗಲೇ ಬಂಧಿತರಾಗಿದ್ದಾರೆ ಎಂದು ತಿಳಿಸಿದರು. ಪ್ರಕರಣದ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಯುವಕರು ಪ್ರೇರಿತರಾಗುತ್ತಿದ್ದಾರೆಯೇ ಎಂಬುದು ಗೊತ್ತಿಲ್ಲ ಎಂದ ಅವರು, "ಆ ರೀತಿಯಾಗಿ ಸಮಾಜದಲ್ಲಿ ಯುವಕರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆಯೇ ಎಂಬುದರ ಕುರಿತು ಮನಃಶಾಸ್ತ್ರಜ್ಞರು ಅಧ್ಯಯನ ನಡೆಸಬೇಕು" ಎಂದು ಅಭಿಪ್ರಾಯಪಟ್ಟರು. 

Tags:    

Similar News