Mahakumbh Stampede | ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ದುರ್ಮರಣ

ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್ ಎಂದು ಗುರುತಿಸಲಾಗಿದೆ. ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ಇಬ್ಬರನ್ನೂ ಪ್ರಯಾಗ್‍ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.;

Update: 2025-01-29 10:21 GMT
Mahakumbh Stampede | ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ದುರ್ಮರಣ
ಬೆಳಗಾವಿಯ ತಾಯಿ, ಮಗಳು ದುರ್ಮರಣ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. 

ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮತ್ತು ಅವರ ಪುತ್ರಿ ಮೇಘಾ ಹತ್ತರವಾಠ್ ಎಂದು ಗುರುತಿಸಲಾಗಿದೆ.

ಕುಂಬಮೇಳದಲ್ಲಿ ಕಾಲ್ತುಳಿತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನೂ ಪ್ರಯಾಗ್‍ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಜ್ಯೋತಿ ಹಾಗೂ ಮೇಘಾ ಅವರು ಮೃತಪಟ್ಟಿರುವುದನ್ನು ಅವರ ಸಂಬಂಧಿ ಗುರುರಾಜ ಹುದ್ದಾರ ಖಚಿತಪಡಿಸಿದ್ದಾರೆ.

ಬೆಳಗಾವಿಯಲ್ಲಿರುವ ಕುಟುಂಬಸ್ಥರಿಗೆ ಇಂದು (ಬುಧವಾರ) ಬೆಳಿಗ್ಗೆಯಿಂದ ಇಬ್ಬರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಫೋನ್‌ ರಿಂಗ್ ಆಗುತ್ತಿದ್ದರೂ, ರಿಸೀವ್ ಮಾಡದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದರು. ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 13 ಜನರ ತಂಡದಲ್ಲಿ ಅವರು ಕುಂಭಮೇಳಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ.

Tags:    

Similar News