ಜೈಲಿನಲ್ಲಿ ಮೊದಲ ಬಾರಿಗೆ ದರ್ಶನ್ ಭೇಟಿಯಾದ ತಾಯಿ: ಅಮ್ಮನನ್ನು ನೋಡಿ ಮಗ ಕಣ್ಣೀರು!

ದರ್ಶನ್‌ ಕುಟುಂಬ ಖಾಸಗಿ ವಾಹನದಲ್ಲೇ ಜೈಲಿನೊಳಗೆ ಹೋಗಿ ಭೇಟಿ ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಬಂಧಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ ಕೊಡಬೇಕಾದರೆ ಹತ್ತಾರು ನಿಯಮಗಳ ಬಗ್ಗೆ ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ನಿಯಮಗಳನ್ನು ಅಧಿಕಾರಿಗಳು ಪರಿಗಣಿಸುತ್ತಿಲ್ಲ ಇಲ್ಲವೆಂಬಂತಾಗಿದೆ ಎಂದು ಅನೇಕರು ದೂರಿದ್ದಾರೆ.

Update: 2024-07-02 10:31 GMT

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ತೂಗುದೀಪ್   ಕುಟುಂಬ ಅಂತರ ಕಾಯ್ದುಕೊಂಡಿದೆ ಎಂದು ಹೇಳಲಾಗುತ್ತಿತ್ತು. ಆದರೆ ಸೋಮವಾರ ಬೆಳಿಗ್ಗೆ ದರ್ಶನ್‌ರನ್ನು ನೋಡಲು ತಾಯಿ ಮೀನಾ, ತಮ್ಮ ದಿನಕರ್, ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಈ ವೇಳೆ, ತಾಯಿಯನ್ನು ನೋಡಿ ದರ್ಶನ್‌ ಕಣ್ಣೀರಿಟ್ಟಿದ್ದಾರೆ.

ಸೋಮವಾರ (ಜು.1) ಬೆಳಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಮಾಧ್ಯಮಗಳ ಕಣ್ಣು ತಪ್ಪಿಸಲು ಖಾಸಗಿ ವಾಹನದಲ್ಲಿ ಬಂದ ದರ್ಶನ್ ಕುಟುಂಬ ಜೈಲಿನ ಒಳಗೆ ಹೋಗಿ ಭೇಟಿ ಮಾಡಿದೆ. ಮಗನ ಸ್ಥಿತಿ ನೋಡುತ್ತಿದ್ದಂತೆ ತಾಯಿ ಮೀನಾ ತೂಗುದೀಪ್ ಭಾವುಕರಾಗಿದ್ದಾರೆ. ದರ್ಶನ್‌ಗೆ ಸಹೋದರ ದಿನಕರ್ ಧೈರ್ಯ ತುಂಬಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೆ ಕುಟುಂಬಸ್ಥರ ಜೊತೆ ಚರ್ಚಿಸಿದ್ದಾರೆ.

ಅಮ್ಮ-ಮಗ ಭೇಟಿಯಾದಾಗ ಇಬ್ಬರೂ ಕೂಡ ಭಾವುಕರಾಗುತ್ತಿದ್ದಂತೆ ದರ್ಶನ್ ಅಮ್ಮನ ಮುಂದೆ ಘಟನೆ ಬಗ್ಗೆ ವಿವರಿಸಿ ತನ್ನ ಪಾತ್ರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮೀನಾ ತೂಗುದೀಪ ಚಾಮುಂಡೇಶ್ವರಿ ನಮ್ಮ ಜೊತೆಗಿದ್ದಾಳೆ ಎಂದು ಪುತ್ರನಿಗೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ. ಪ್ರತ್ಯೇಕ ಕೊಠಡಿಯಲ್ಲಿ 45 ನಿಮಿಷ ಮಗನೊಂದಿಗೆ ಮೀನಾ ಮಾತಾಡಿದ್ದಾರೆ. ಇದೇ ವೇಳೆ ಸಹೋದರ ದಿನಕರ್ ಕೂಡ ದರ್ಶನ್‌ಗೆ ಸಾಂತ್ವನ ಹೇಳಿದ್ದಾರೆ.

ದರ್ಶನ್‌ ಕುಟುಂಬ ಖಾಸಗಿ ವಾಹನದಲ್ಲೇ ಜೈಲಿನೊಳಗೆ ಹೋಗಿ ಭೇಟಿ ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಬಂಧಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ ಕೊಡಬೇಕಾದರೆ ಹತ್ತಾರು ನಿಯಮಗಳ ಬಗ್ಗೆ   ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ನಿಯಮಗಳನ್ನು ಅಧಿಕಾರಿಗಳು ಪರಿಗಣಿಸುತ್ತಿಲ್ಲ ಇಲ್ಲವೆಂಬಂತಾಗಿದೆ ಎಂದು ಅನೇಕರು ದೂರಿದ್ದಾರೆ.

ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಇರುತ್ತದೆ. ಕಳೆದ ವಾರ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ಭೇಟಿ ಮಾಡಿದ್ದರು. ನಂತರ ನಟ ವಿನೋದ್ ಪ್ರಭಾಕರ್, ರಕ್ಷಿತಾ ಪ್ರೇಮ್ ದಂಪತಿ ಭೇಟಿ ಮಾಡಿ ಮಾತನಾಡಿದ್ದರು.

Tags:    

Similar News