ವಿದ್ಯಾರ್ಥಿ ನಿಲಯಗಳ ಕಾರ್ಯಾರಂಭಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

ಹಾವೇರಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಜೂರಾದ ಐದು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಮಾಡಿರುವುದನ್ನು ಸ್ವಾಗತಿಸುತ್ತೇನೆ.

Update: 2024-09-01 11:55 GMT
ಬಸವರಾಜ ಬೊಮ್ಮಾಯಿ
Click the Play button to listen to article

ಹಾವೇರಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಜೂರಾದ ಐದು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೆಟ್ರಿಕ್ ನಂತರದ ಸ್ನಾತಕೊತ್ತರ ವಿದ್ಯಾರ್ಥಿನಿಲಯ, ಗೊಟಗೋಡಿ (ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ)(100 ಸಂಖ್ಯಾಬಲ), ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಶಿಗ್ಗಾವಿ ಟೌನ್(100 ಸಂಖ್ಯಾಬಲ), ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯ, ಗುಡ್ಡದ ಚನ್ನಾಪುರ(150 ಸಂಖ್ಯಾಬಲ), ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿನಿಲಯ, ಗುಡ್ಡದ ಚೆನ್ನಾಪುರ(50 ಸಂಖ್ಯಾಬಲ) ಮತ್ತು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಸವಣೂರು ಟೌನ್(100 ಸಂಖ್ಯಾಬಲ) ಹೀಗೆ ಮೆಟ್ರಿಕ್ ನಂತರದ ಐದು ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿತ್ತು.

ನಂತರ ಅಧಿಕಾರಕ್ಕೆ ಬಂದ ಸರ್ಕಾರ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವ ಕುರಿತು ವಿಳಂಬ ಧೋರಣೆ ಅನುಸರಿಸಿದ್ದು, ತಡವಾಗಿಯಾದರೂ ಹುದ್ದೆಗಳನ್ನು ಸೃಜಿಸಿ ಆದೇಶಿದ್ದು, ಸ್ವಾಗತಾರ್ಹ. ನಮ್ಮ ಅವಧಿಯಲ್ಲಿ ಮೂರು ಕಟ್ಟಡಗಳ ನಿರ್ಮಾಣ ಮಾಡಿದ್ದು ಸಂಬಂಧ ಪಟ್ಟ ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳನ್ನು ಆದಷ್ಟು ಬೇಗ ಕಾರ್ಯಾರಂಭ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸಬೇಕೆಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ‌.

Tags:    

Similar News