ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 16 ಜಿಲ್ಲೆಗಳಲ್ಲಿ ಖರೀದಿ ಆರಂಭ
ರಾಜ್ಯದ 16 ಜಿಲ್ಲೆಗಳಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ ಮತ್ತು ಭತ್ತ ಖರೀದಿಗೆ ಸೋಮವಾರ ಚಾಲನೆ ನೀಡಲಾಗಿದೆ.;
ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (KFCSC) ರಾಜ್ಯದ 16 ಜಿಲ್ಲೆಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ ಮತ್ತು ಭತ್ತ ಖರೀದಿಗೆ ಸೋಮವಾರ ಚಾಲನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಆಗಲಕೋಟೆ, ಕೋಲಾರ, ರಾಮನಗರ, ಕೊಪ್ಪಳ, ವಿಜಯಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಎಂಎಸ್‌ಪಿ ಯೋಜನೆಯಡಿ ಖರೀದಿ ಆರಂಭವಾಗಿದೆ.
ಈ ಕುರಿತು ʼದ.ಫೆಡೆರಲ್ ಕರ್ನಾಟಕʼದೊಂದಿಗೆ ಮಾತನಾಡಿದ ಕೆಎಫ್‌ಸಿಎಸ್‌ಸಿ ಅಧಿಕಾರಿಯೊಬ್ಬರು, ನಮ್ಮ ನಿಗಮಕ್ಕೆ 16 ಜಿಲ್ಲೆಗಳನ್ನು ನೀಡಲಾಗಿದೆ. ನಮ್ಮ ಇಲಾಖೆಯಲ್ಲಿ ಭತ್ತ, ರಾಗಿ ಮತ್ತು ಬಿಳಿಜೋಳಗಳನ್ನು ಖರೀದಿ ಮಾಡಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 2.5 ಲಕ್ಷ ಟನ್ ಭತ್ತ, 5.99 ಲಕ್ಷ ರಾಗಿ, 3 ಲಕ್ಷ ಬಿಳಿ ಜೋಳದ ಖರೀದಿ ಗುರಿಯನ್ನು ಹೊಂದಿದ್ದು, ಸಾಮಾನ್ಯ ಭತ್ತಕ್ಕೆ ಪ್ರತೀ ಕ್ವಿಂಟಾಲ್‌ಗೆ 2,183 ರೂ, ಭತ್ತ ಗ್ರೇಡ್ ಎ ಗೆ 2,203, ಹೈಬ್ರೀಡ್ ಬಿಳಿ ಜೋಳಕ್ಕೆ 3,180, ಮಾಲ್ಡಿಂಡಿ ಬಿಳಿ ಜೋಳಕ್ಕೆ 3225 ಹಾಗೂ ರಾಗಿಗೆ 3,846ರೂ ಕನಿಷ್ಟ ಬೆಂಬಲ ದರವನ್ನು ನಿಗದಿ ಪಡಿಸಲಾಗಿದೆ ಎಂದರು.