Mysuru MUDA Scam| ರಾಜ್ಯಪಾಲರ ನಡೆ‌ ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಮುಡಾದಲ್ಲಿ ಅಕ್ರಮವಾಗಿ ಸೈಟ್ ಪಡೆದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್​ ಆಗಸ್ಟ್​ 19 ರಂದು ರಾಜ್ಯಾದ್ಯಂತ ಪ್ರತಿಭಟನೆ ಕರೆ ನೀಡಿದೆ.

Update: 2024-08-18 05:43 GMT
ಡಿ.ಕೆ ಶಿವಕುಮಾರ್‌
Click the Play button to listen to article

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಅಕ್ರಮವಾಗಿ ಸೈಟ್ ಪಡೆದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್​ ಆಗಸ್ಟ್​ 19 ರಂದು ರಾಜ್ಯಾದ್ಯಂತ ಪ್ರತಿಭಟನೆ ಕರೆ ನೀಡಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಸಂವಿಧಾನ ವಿರೋಧಿಯಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿ ಖಂಡಿಸಿ ಆಗಸ್ಟ್ 19ರ ಸೋಮವಾರದಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಪಕ್ಷದ ಎಲ್ಲಾ ಕಾರ್ಯಕರ್ತರು, ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಸೋಮವಾರ ೧೧ ಗಂಟೆಗೆ ಎಲ್ಲಾ ತಾಲೂಕು, ಗ್ರಾಮ ಪಂಚಾಯತ್‌ ಮಟ್ಟದಿಂದ ಎಲ್ಲಾ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡು ಜಿಲ್ಲಾಕಚೇರಿವರೆಗೆ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಜ್ಞಾಪನಾ ಪತ್ರವನ್ನು  ನೀಡಬೇಕು ಎಂದು ಅವರು ಸೂಚಿಸಿದ್ದಾರೆ. ತಾವು ಸಹಿ ಮಾಡಿದ ಪತ್ರವನ್ನು  ರಾಷ್ಟ್ರಪತಿಗಳಿಗೆ ನೇರವಾಗಿ ಇ-ಮೈಲ್ ಮೂಲಕ (presidentofindia@rb.nic.in) ಮೂಲಕ ಕಳಿಸುವಂತೆಯೂ ಡಿ.ಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ. 

Tags:    

Similar News