ಮುನಿರತ್ನ ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕನಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ.;

Update: 2024-09-21 07:49 GMT
ಮುನಿರತ್ನ ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕನಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಬಿಜೆಪಿ ಶಾಸಕ ಮುನಿರತ್ನ
Click the Play button to listen to article

ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. 

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಮತ್ತೆ ಬಂಧಿಸಲಾಗಿತ್ತು. ಮುನಿರತ್ನನನ್ನು ಪೊಲೀಸರು ಶನಿವಾರ ಕೋರ್ಟ್​ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ, ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೆಲ್ಲ ಶುರುವಾಗಿದೆ. ಐದು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಿಸಿದ್ದಾರೆ. ಆಕೆ ಮೊದಲೇ ಕೊಡಬಹುದಿತ್ತಲ್ಲವೇ? ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾದವನು, ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ ಎಂದು ಅಳಲು ತೋಡಿಕೊಂಡಿದ್ದಾನೆ.

Tags:    

Similar News