Mysore MUDA Scam | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.

Update: 2024-08-13 08:37 GMT

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.

ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಎಂಬುವರು ದೂರು ಸಲ್ಲಿಸಿದ್ದು, ರಾಜ್ಯಪಾಲರ ಹೆಸರಿನಲ್ಲಿ ಅಕ್ರಮ ಪರಿತ್ಯಾಜನ ಪತ್ರ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಏನಿದು ದೂರು?

ʻʻಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ಕೆ ಸಿ ಉಮೇಶ್ ಎಂಬುವರು ಪರಿತ್ಯಾಜನ ಪತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂ. 464ರ 3.16 ಎಕರೆ ಜಮೀನು ಸಂಬಂಧ ಪರಿತ್ಯಾಜನ ಪತ್ರ ನೋಂದಣಿ ಮಾಡಲಾಗಿದೆ. 25-11-2021ರಲ್ಲಿ ಅಕ್ರಮವಾಗಿ ನಿಮ್ಮ ಪದನಾಮದಲ್ಲಿ ಪರಿತ್ಯಾಜನ ಪತ್ರ ನೋಂದಣಿಯಾಗಿದೆ. ಪಾರ್ವತಿಯವರು ನಿಮ್ಮ ಪದನಾಮದಲ್ಲಿ ಪರಿತ್ಯಾಜನ ಪತ್ರ ಮಾಡಿಕೊಟ್ಟಿದ್ದಾರೆ. ಕೂಡಲೇ ಉಮೇಶ್ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕುʼʼ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಸ್ನೇಹಮಹಿ ಕೃಷ್ಣ ಅವರು ನೀಡಿರುವ ದೂರನ್ನು ರಾಜ್ಯಪಾಲರ ಕಚೇರಿ ಸ್ವೀಕರಿಸಿದೆ. ರಾಜ್ಯಪಾಲರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಸ್ನೇಹಮಹಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದು ಸಾಲು ಸಾಲು ಆರೋಪ ಮಾಡಿದ್ದಾರೆ. 

Tags:    

Similar News