Mysore MUDA Scam | ಬದಲಿ ನಿವೇಶನಕ್ಕೆ ಸಿಎಂ ಪತ್ನಿ ಒತ್ತಾಯ: ಎಚ್‌ ಡಿ ಕುಮಾರಸ್ವಾಮಿ ಆರೋಪ

ʻʻಸೂಪರ್ ಸಿಎಂ ಅವರೇ 'ಒತ್ತಾಯಿಸಿರುತ್ತಾರೆ!!!' ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..??ʼʼ ಎಂದು ಎಚ್‌ ಡಿ ಕೆ ವ್ಯಂಗ್ಯ ಮಾಡಿದ್ದಾರೆ.

Update: 2024-08-23 06:44 GMT

ಮುಡಾ ಬದಲಿ ನಿವೇಶನವನ್ನು 50:50ರ ಅನುಪಾತದಲ್ಲಿಯೇ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಒತ್ತಾಯ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ದಾಖಲೆಯೊಂದನ್ನು ಹಂಚಿಕೊಂಡಿದ್ದಾರೆ. ʻʻಸನ್ಮಾನ್ಯ ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಭಾವಿಸುತ್ತೇನೆʼʼ ಎಂದು ಕೆಣಕಿದ್ದಾರೆ.

ʻʻನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. 50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ 'ಒತ್ತಾಯ' ಮಾಡಿದ್ದಾರೆ!! ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..?ʼʼ ಎಂದು ಪ್ರಶ್ನೆ ಮಾಡಿದ್ದಾರೆ.

ʻʻಸೂಪರ್ ಸಿಎಂ ಅವರೇ 'ಒತ್ತಾಯಿಸಿರುತ್ತಾರೆ!!!' ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..??ʼʼ ಎಂದು ಎಚ್‌ ಡಿ ಕೆ ವ್ಯಂಗ್ಯ ಮಾಡಿದ್ದಾರೆ.

Tags:    

Similar News