Mysore MUDA Scam | ಸಾಕ್ಷ್ಯ ನಾಶ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದಲ್ಲಿ 14 ಭೂ ನಿವೇಶನಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಪ್ರದೀಪ್ ಕುಮಾರ್ ಅವರು ಹೊಸ ದೂರು ದಾಖಲಿಸಿದ್ದಾರೆ.

Update: 2024-10-03 10:17 GMT
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಹೊಸ ದೂರು ದಾಖಲಾಗಿದೆ.

ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾದಿಂದ ತಮ್ಮ ಪತ್ನಿಗೆ ಹಂಚಿಕೆಯಾಗಿದ್ದ 14 ಬದಲಿ ನಿವೇಶನಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದೂರುದಾರ ಪ್ರದೀಪ್ ಕುಮಾರ್ ಅವರು ಹೊಸ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಮುಖ್ಯಮಂತ್ರಿಯವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರೇ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ. ದೂರುದಾರರು ಸಂಪೂರ್ಣ ತನಿಖೆ ಮತ್ತು ಆರೋಪಗಳ ಬಗ್ಗೆ ಔಪಚಾರಿಕ ಪ್ರಕರಣವನ್ನು ದಾಖಲಿಸಲು ಕೋರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 24 ವಜಾಗೊಳಿಸಿತ್ತು. ಮುಡಾದಿಂದ 14 ಸೈಟ್‌ಗಳನ್ನು ಅವರ ಪತ್ನಿಗೆ ಹಂಚಿಕೆ ಮಾಡುವಲ್ಲಿನ ಅಕ್ರಮಗಳ ಕುರಿತು ಮುಖ್ಯಮಂತ್ರಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪೊಲೀಸರು ಎಫ್‌ಐಆರ್‌ಗೆ ಸಮಾನವಾದ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿಯನ್ನು (ಇಸಿಐಆರ್) ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ ಮಂಜೂರಾಗಿದ್ದ 14 ನಿವೇಶನಗಳ ಮಾಲೀಕತ್ವ ಮತ್ತು ಸ್ವಾಧೀನವನ್ನು ಬಿಟ್ಟುಕೊಡಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಡಾ ಮಂಗಳವಾರ ಹಿಂಪಡೆಯಲು ನಿರ್ಧರಿಸಿದೆ. ಈ ನಿವೇಶನಗಳ ಕ್ರಯಪತ್ರವನ್ನು ರದ್ದುಗೊಳಿಸಲು ಮುಡಾ ಆದೇಶ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿದ ಕೆಲವೇ ಗಂಟೆಗಳ ನಂತರ, ಅವರ ಪತ್ನಿ ಸೋಮವಾರ ಮುಡಾಕ್ಕೆ ಪತ್ರ ಬರೆದು 14 ನಿವೇಶನಗಳ ಮಾಲೀಕತ್ವ ಮತ್ತು ಸ್ವಾಧೀನವನ್ನು ಬಿಟ್ಟುಕೊಡುವ ನಿರ್ಧಾರವನ್ನು ತಿಳಿಸಿದ್ದು, ಯಾವುದೇ ಸೈಟ್, ಮನೆ, ಆಸ್ತಿ ಮತ್ತು ಸಂಪತ್ತು ತನಗೆ ತನ್ನ ಪತಿಗಿಂತ ದೊಡ್ಡದಲ್ಲ ಎಂದು ತಿಳಿಸಿದ್ದರು.

Tags:    

Similar News