Mysore MUDA Scam | ರಾಜ್ಯದ ಬೆಳವಣಿಗೆ ಹೈಕಮಾಂಡ್‌ ಗಮನಕ್ಕೆ ತರಲಾಗಿದೆ: ಸಿಎಂ ಸಿದ್ದರಾಮಯ್ಯ

Update: 2024-08-24 10:15 GMT

ʻʻಶುಕ್ರವಾರ ನಮ್ಮ ಹೈಕಮಾಂಡ್ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ, ರಾಜ್ಯದ ಬೆಳವಣಿಗೆಗಳನ್ನು ಅವರ ಗಮನಕ್ಕೆ ತಂದಿದ್ದೇವೆʼʼ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ದೆಹಲಿಯಿಂದ ಬೆಂಗಳೂರಿಗೆ ಮರಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʻʻನಿನ್ನೆ (ಶುಕ್ರವಾರ) ನಾನು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಲವು ಸಚಿವರು ದೆಹಲಿಗೆ ಹೋಗಿದ್ದೆವು. ರಾಜ್ಯದ ಬೆಳವಣಿಗೆ ಬಗ್ಗೆ ಮತ್ತು ಮುಡಾ ಪ್ರಕರಣದ ಪಾದಯಾತ್ರೆ ಬಗ್ಗೆ ಚರ್ಚೆ ಮಾಡಿದ್ದೇವೆʼʼ ಎಂದರು.

ʻʻರಾಜ್ಯಪಾಲರು ಪ್ರಾಸಿಕ್ಯೂಷನ್‌​ಗೆ ಅನುಮತಿ ನೀಡಿದ್ದು ಕಾನೂನುಬಾಹಿರ. ಈ ಬಗ್ಗೆ ಸಚಿವ ಸಂಪುಟ ಸಭೆಯ ನಿರ್ಣಯ ಕೂಡ ಕಳುಹಿಸಲಾಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಶ್ನಿಸಿ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಲಾಗಿದೆ. ಆಗಸ್ಟ್​​ 29ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆʼʼ ಎಂದು ಹೇಳಿದರು.

ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ದೂರು ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ʻʻಇದು ಪಕ್ಷದ ಎಲ್ಲರ ಅಭಿಪ್ರಾಯವೂ ಆಗಿದೆ ಎಂದರು. ಮುಡಾ ವಿಚಾರವಾಗಿ ಬಿಜೆಪಿ ಪಾದಯಾತ್ರೆ ನಡೆಸಿದೆ. ಅದನ್ನು ನಾವು ರಾಜಕೀಯವಾಗಿಯೇ ಎದುರಿಸಿದ್ದೇವೆ. ಆದರೆ ರಾಜ್ಯಪಾಲರು ಪ್ರಾಸಿಕ್ಯೂಷನ್‌​ಗೆ ಅನುಮತಿ ನೀಡಿದ್ದು ತಪ್ಪುʼʼ ಎಂದರು.

ʻʻರಾಜ್ಯಪಾಲರು ಸರ್ಕಾರದ 11 ಬಿಲ್​ ವಾಪಸ್​ ಕಳುಹಿಸಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ವಾಪಸ್​ ಕಳುಹಿಸಿರುವ ಬಿಲ್‌ಗಳು ಸದನದಲ್ಲಿ ಅನುಮೋದನೆಗೊಂಡಿವೆ. ಅವುಗಳ ಬಗ್ಗೆ ವಿವರಣೆ ಕೇಳಿದ್ದರೆ ಕೊಡುತ್ತಿದ್ದೆವು. ಆದರೆ ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ನಾವು ತೀರ್ಮಾನ ಮಾಡುತ್ತೇವೆʼʼ ಎಂದರು.

Tags:    

Similar News