Mysore MUDA Scam | ಇಡಿ ಮುಂದೆ ಹಾಜಾರಾದ ದೂರುದಾರ ಸ್ನೇಹಮಯಿ ಕೃಷ್ಣ

ಮುಡಾ ಹಗರಣ ಪ್ರಕರಣದ ದೂರುದಾರರಲ್ಲಿ ಒಬ್ಬರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಗುರುವಾರ ಬೆಂಗಳೂರಿನ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದಾರೆ.

Update: 2024-10-03 10:30 GMT
ಸ್ನೇಹಮಯಿ ಕೃಷ್ಣಾ ಅವರು ಇಡಿ ಮುಂದೆ ಹಾಜರಾಗಿದ್ದಾರೆ.

ಮುಡಾ ಹಗರಣದ ದೂರುದಾರರಲ್ಲಿ ಒಬ್ಬರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಗುರುವಾರ ಬೆಂಗಳೂರಿನ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದಾರೆ. ತನಿಖೆಗೆ ಸಂಬಂಧಿಸಿದಂತೆ ಸಾಕ್ಷ್ಯ ಮತ್ತು ದಾಖಲೆಗಳನ್ನು ನೀಡಲು ಇಡಿ ಮುಂದೆ ಹಾಜಾರಾಗಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನೀಡಿದ 14 ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಇಡಿ ಸೆಪ್ಟೆಂಬರ್ 30 ರಂದು ಪೊಲೀಸ್ ಎಫ್‌ಐಆರ್‌ಗೆ ಸಮಾನವಾದ ಜಾರಿ ಪ್ರಕರಣ ಮಾಹಿತಿ ವರದಿಯನ್ನು (ಇಸಿಐಆರ್) ದಾಖಲಿಸಿದೆ. 

ಸೆ.27 ರಂದು ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್‌ನ ಗಮನಕ್ಕೆ ಬಂದಿರುವ ಇಡಿ, ಮೈಸೂರು ಮೂಲದ ಆರ್‌ಟಿಐ ಕಾರ್ಯಕರ್ತನಿಗೆ ಸಾಕ್ಷಿ ನೀಡಲು ಇಡಿಯ ಬೆಂಗಳೂರು ವಲಯ ಕಚೇರಿಯ ತನಿಖಾ ಅಧಿಕಾರಿಯ ಮುಂದೆ ಖುದ್ದಾಗಿ ಹಾಜರಾಗುವಂತೆ ಸಮನ್ಸ್ ನೀಡಿತ್ತು. 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ತನಿಖೆ ಅಥವಾ ವಿಚಾರಣೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸಿ ಎಂದು ಮೂಲಗಳು ತಿಳಿಸಿವೆ.

ಕೃಷ್ಣ ಅವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಅವರು ಇಡಿಗೂ ದೂರು ನೀಡಿದ್ದರು.

"ಅವರು (ಇಡಿ) ನನಗೆ ಸಮನ್ಸ್ ನೀಡಿದ್ದಾರೆ. ಅವರು ಕೇಳಿರುವ ದಾಖಲೆಗಳನ್ನು ನಾನು ಸಲ್ಲಿಸಲಿದ್ದೇನೆ" ಎಂದು ಸ್ನೇಹಮಯಿ ಕೃಷ್ಣ ಅವರು  ಇಡಿ ಕಚೇರಿಗೆ ತೆರಳುವ ಮೊದಲು ಸುದ್ದಿಗಾರರಿಗೆ ತಿಳಿಸಿದರು.

Tags:    

Similar News