ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ, ಜನರು ಆತಂಕ ಪಡುವ ಅಗತ್ಯವಿಲ್ಲ: ಡಾ.ಶರಣ್ ಪ್ರಕಾಶ್ ಪಾಟೀಲ್
ಕೊರೊನಾ ಬಗ್ಗೆ ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜನನಿಬಿಡ ಸ್ಥಳಗಳಲ್ಲಿ, ಜ್ವರ, ಶೀತ, ಕೆಮ್ಮ ಇರುವವರು ಮಾಸ್ಕ್ ಧರಿಸಬೇಕು ಎಂದು ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.;
ಡಾ. ಶರಣ್ ಪ್ರಕಾಶ್ ಪಾಟೀಲ್
ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣ ಸಿದ್ಧ: ಸಚಿವ ಶರಣಪ್ರಕಾಶ್ ಪಾಟೀಲ್ ಭರವಸೆ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭರವಸೆ ನೀಡಿದ್ದಾರೆ. ಸರ್ಕಾರವು ಕೊರೊನಾ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅವರು ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಕೋವಿಡ್ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದರು.
ಇದೇ ವೇಲೆ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಗ್ಗೆ ಮಾಹಿತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಜನನಿಬಿಡ ಸ್ಥಳಗಳಲ್ಲಿ, ಜ್ವರ, ಶೀತ, ಕೆಮ್ಮು ಇರುವವರು ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಿದರು. ವಿಶೇಷವಾಗಿ ಗರ್ಭಿಣಿಯರು ಮತ್ತು ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಜನರು ಕೂಡ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಬೇಸಿಗೆ ರಜೆ ಬಳಿಕ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಲ್ಲಿ ಜ್ವರ, ಶೀತ, ಕೆಮ್ಮು ಮುಂತಾದ ಲಕ್ಷಣಗಳಿದ್ದರೆ ಅವರನ್ನು ಶಾಲೆಗಳಿಗೆ ಕಳುಹಿಸಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀತ ಅಥವಾ ನೆಗಡಿ ಕಂಡುಬಂದರೆ, ಕೂಡಲೇ ಪೋಷಕರಿಗೆ ಕರೆ ಮಾಡಿ ಅವರನ್ನು ಮನೆಗೆ ಕಳುಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಟೆಸ್ಟಿಂಗ್ ಮತ್ತು ಆಸ್ಪತ್ರೆಗಳ ಸಿದ್ಧತೆ
ತೀವ್ರ ಉಸಿರಾಟದ ತೊಂದರೆ (SARI - Severe Acute Respiratory Infection) ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ತಪಾಸಣೆ ಮಾಡುವಂತೆ ಸಚಿವರು ಸೂಚಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ಆಸ್ಪತ್ರೆಯ ನಿರ್ದೇಶಕರೊಂದಿಗೆ ಸಭೆ ನಡೆಸಿ, ಲ್ಯಾಬ್ ವ್ಯವಸ್ಥೆ ಮತ್ತು ನಾಲ್ಕು ವಿಭಾಗಗಳಲ್ಲಿ ಟೆಸ್ಟಿಂಗ್ಸೌ ಲಭ್ಯಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಆಕ್ಸಿಜನ್ ಬೆಡ್‌ಗಳು ಮತ್ತು ವೆಂಟಿಲೇಟರ್‌ಗಳ ಲಭ್ಯತೆಯ ಬಗ್ಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಸಭೆಯಲ್ಲಿ ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹಿಸಿನ್ ಮತ್ತು ವೈದ್ಯಕೀಯ ಶಿಕ್ಷಣದ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಬಿ.ಎಲ್. ಉಪಸ್ಥಿತರಿದ್ದರು.