ಗುಂಡ್ಲುಪೇಟೆ: ಸಾಗಡೆ ಗ್ರಾಮದ ಬಳಿ ನವಜಾತ ಶಿಶು ಪತ್ತೆ; ಸ್ಥಳೀಯರಿಂದ ರಕ್ಷಣೆ
ಸ್ಥಳೀಯರು, ಅಂಗನವಾಡಿ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಮಗುವನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಮಗುವನ್ನು ಸಾಗಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.;
By : The Federal
Update: 2025-07-21 10:15 GMT
ಮೈಸೂರಿನ ಗುಂಡ್ಲುಪೇಟೆ ತಾಲೂಕಿನ ಸಾಗಡೆ ಗ್ರಾಮದ ಬಳಿ ರಸ್ತೆ ಮಧ್ಯ ಬೇಲಿಯಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ.
ಸ್ಥಳೀಯರು, ಅಂಗನವಾಡಿ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಮಗುವನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಮಗುವನ್ನು ಸಾಗಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಗುವನ್ನು ಬಿಟ್ಟು ಹೋಗಿರುವ ಪೋಷಕರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೋಷಕರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.
ರಕ್ಷಿಸಲ್ಪಟ್ಟ ಮಗುವಿಗೆ ತಕ್ಷಣ ವೈದ್ಯಕೀಯ ಆರೈಕೆ ನೀಡಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.