ನಿಖಿಲ್‌ ಕುಮಾರಸ್ವಾಮಿಗೆ ಜೆಡಿಎಸ್​ ರಾಜ್ಯಾಧ್ಯಕ್ಷ ನಿಶ್ಚಿತ ; ದೇವೇಗೌಡ ಸುಳಿವು

ಎಚ್‌.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ಪಕ್ಷದ ವ್ಯವಹಾರಗಳನ್ನು ಸಾಧ್ಯವಾಗುತ್ತಿಲ್ಲ. ಇನ್ನು ಮುಂದೆ ನಿಖಿಲ್‌ ಕುಮಾರಸ್ವಾಮಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ ಎಂಬ ದೇವೇಗೌಡರ ಹೇಳಿಕೆ ಪಕ್ಷದ ನಾಯಕರಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Update: 2024-12-08 05:50 GMT
ಎಚ್​ ಡಿ ದೇವೇಗೌಡ

ಚನ್ನಪಟ್ಟಣ ಉಪ ಚುನಾವಣೆಯ ಹಿನ್ನಡೆಯೊಂದಿಗೆ ಹ್ಯಾಟ್ರಿಕ್‌ ಸೋಲು ಕಂಡಿರುವ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ವರಿಷ್ಠರು ನಿರ್ಧರಿಸಿದ್ದಾರೆ. ಈಚೆಗೆ ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೂ ಪಕ್ಷದ ಜವಾಬ್ದಾರಿ ವಹಿಸುವ ಸುಳಿವು ನೀಡಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ಪಕ್ಷದ ವ್ಯವಹಾರಗಳನ್ನು ಸಾಧ್ಯವಾಗುತ್ತಿಲ್ಲ. ಇನ್ನು ಮುಂದೆ ನಿಖಿಲ್‌ ಕುಮಾರಸ್ವಾಮಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ ಎಂಬ ದೇವೇಗೌಡರ ಹೇಳಿಕೆ ಪಕ್ಷದ ನಾಯಕರಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಪಕ್ಷದಲ್ಲಿ ಕುಟುಂಬ ರಾಜಕಾರಣದ ವಿರುದ್ಧ ಹಲವು ಹಿರಿಯ ನಾಯಕರು ಅಸಮಾಧಾನಗೊಂಡು, ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ರಾಮನಗರ, ಚನ್ನಪಟ್ಟಣ ವಿಧಾನಸಭೆ ಚುನಾವಣೆ ಹಾಗೂ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಪರಾಜಿತರಾಗಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ರಾಜಕೀಯ ಭವಿಷ್ಯದ ಕುರಿತು ಚರ್ಚೆಗಳಾಗುತ್ತಿವೆ. ಹೀಗಿರುವಾಗ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ವಹಿಸುವುದು ಎಷ್ಟು ಸೂಕ್ತ ಎಂಬ ಅಪಸ್ವರಗಳು ಕೇಳಿಬರುತ್ತಿವೆ.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಈಚೆಗೆ ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಭೆಯಲ್ಲಿ ಪಕ್ಷದ ಜವಾಬ್ದಾರಿಯನ್ನು ನಿಖಿಲ್‌ಗೆ ವಹಿಸುವ ಕುರಿತು ಹೇಳಿಕೆ ನೀಡಿದ್ದರು.

ಈಗ ದೇವೇಗೌಡರು ಕೂಡ ಕುಮಾರಸ್ವಾಮಿ ಹೇಳಿಕೆಗೆ ದನಿಗೂಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷದಲ್ಲಿ ನಿಖಿಲ್ ಯುವ ನಾಯಕ. ಉಜ್ವಲ ಭವಿಷ್ಯ ಹೊಂದಿದ್ದಾರೆ. ಹಾಗಾಗಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡುತ್ತೇವೆ. ನಿಖಿಲ್‌ ನಾಯಕತ್ವದಲ್ಲೇ ಬೇರುಮಟ್ಟದಿಂದ ಪಕ್ಷ ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.

Tags:    

Similar News