HMT ಕೈಗಡಿಯಾರದ ಪರ ನಿಖಿಲ್‌ ಕುಮಾರಸ್ವಾಮಿ ಅಭಿಯಾನ

HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು ಎಂದಿರುವ ನಿಖಿಲ್‌, ನಾನು ಎಚ್‌ಎಂಟಿ ಕಟ್ಟಿದ್ದೇನೆ.. ನೀವು? ಎಂದು ಹೊಸ ಅಭಿಯಾನ ಶುರು ಮಾಡಿದ್ದಾರೆ;

Update: 2024-09-06 08:29 GMT
ಮಗನ ಕೈಗೆ HMT ಕೈಗಡಿಯಾರ ಕಟ್ಟುತ್ತಿರುವ ಹೆಚ್‌ ಡಿ ಕುಮಾರಸ್ವಾಮಿ

ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ ಎಚ್‌ಎಂಟಿ (HMT) ಕೈಗಡಿಯಾರಗಳನ್ನೇ ಯುವಜನರು ಕಟ್ಟಬೇಕು ಎಂದು  ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಯುವಜನತೆಗೆ ಕರೆ ನೀಡಿದ್ದಾರೆ. 

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ನಿಖಿಲ್‌ ಕುಮಾರಸ್ವಾಮಿ, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು ಎಂದು ಎಚ್‌ಎಂಟಿ ವಾಚುಗಳ ಪರ ಹೊಸ ಅಭಿಯಾನ ಶುರು ಮಾಡಿದ್ದಾರೆ.

ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು. ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಕೋಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ. ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ ಎಂದು ಯುವಜನರಲ್ಲಿ ವಿನಂತಿಸಿದ್ದಾರೆ. 

Tags:    

Similar News