ಡಿಕೆಶಿ ಎದುರು ಕಣ್ಣೀರು ಹಾಕಿದ ಸಿ ಪಿ ವೈ ಪುತ್ರಿ ನಿಶಾ ಯೋಗೇಶ್ವರ್!
ಕೆಲ ದಿನಗಳ ಹಿಂದೆ ನಿಶಾ ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದು, ನಾನು ಸದ್ಯಕ್ಕೆ ಯಾವ ಪಕ್ಷದಲ್ಲಿಯೂ ಇಲ್ಲ, ನಾನು ಯಾವುದೇ ಪಕ್ಷವನ್ನು ಸೇರಿಲ್ಲ. ಕಾಂಗ್ರೆಸ್ ಸೇರಲು ಪ್ರಯತ್ನ ಮಾಡಿದ್ದೇನೆ. ಈ ಬಗ್ಗೆ ಮುಂದೆ ನಾನು ಉತ್ತರ ಕೊಡುತ್ತೇನೆ ಎಂದಿದ್ದರು.;
ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಕಚೇರಿಗೆ ಹೋಗಿ ಡಿಸಿಎಂ ಡಿ ಕೆ ಶಿವಕುಮಾರ್ ಮುಂದೆ ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ.
ಈಗಾಗಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಡಿ ಕೆ ಸುರೇಶ್ ಅವರ ಜೊತೆಗೆ ಹಲವು ಬಾರಿ ಮಾತುಕತೆ ನಡೆಸಿರುವ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಸೋಮವಾರ ಕೆ ಶಿವರಾಂ ಅವರ ಪತ್ನಿ ವೀಣಾ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾದರು. ಅದೇ ಸಂದರ್ಭದಲ್ಲಿ ನಿಶಾ ಕೂಡ ಏಕಾಏಕಿ ಕೆಪಿಸಿಸಿ ಕಚೇರಿ ಬಳಿ ಬಂದು ಡಿ ಕೆ ಶಿವಕುಮಾರ್ ಭೇಟಿಯಾಗಿದ್ದಾರೆ.
ಈ ವೇಳೆ ನಿಶಾ ಅವರು, ತಮ್ಮನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂಬ ನಿಟ್ಟಿನಲ್ಲಿ ಡಿ ಕೆ ಶಿವಕುಮಾರ್ ಮುಂದೆ ಕಣ್ಣೀರಿಟ್ಟಿದ್ದಾರೆ. ಆದರೆ ಈ ಪ್ರಸ್ತಾಪವನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅವರು ತಿರಸ್ಕರಿಸಿದ್ದಾರೆ. ಈ ವೇಳೆ ಪಕ್ಷ ಸೇರ್ಪಡೆ ಕುರಿತು ನಿಶಾ ಯೋಗೇಶ್ವರ್ ಚರ್ಚೆಗೆ ಮುಂದಾದಾಗ ʻʻತಲೆಯಲ್ಲಿ ಏನೋ ಇದೆ, ನೋಡುತ್ತೇನೆ ಹೋಗಮ್ಮಾʼʼ ಎಂದು ಹೇಳಿ ಕಳುಹಿಸಿದ್ದಾರೆ. ಆದರೆ, ನಿಶಾ ಯೋಗೇಶ್ವರ್ ಮಾತ್ರ ತಮ್ಮನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬೇಕು ಎಂದು ಪಟ್ಟು ಹಿಡಿದು ಕಣ್ಣೀರಿಟ್ಟಿದ್ದಾರೆ.
ಕೆಲ ದಿನಗಳ ಹಿಂದೆ ನಿಶಾ ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದು, ನಾನು ಸದ್ಯಕ್ಕೆ ಯಾವ ಪಕ್ಷದಲ್ಲಿಯೂ ಇಲ್ಲ, ನಾನು ಯಾವುದೇ ಪಕ್ಷವನ್ನು ಸೇರಿಲ್ಲ. ಕಾಂಗ್ರೆಸ್ ಸೇರಲು ಪ್ರಯತ್ನ ಮಾಡಿದ್ದೇನೆ. ಈ ಬಗ್ಗೆ ಮುಂದೆ ನಾನು ಉತ್ತರ ಕೊಡುತ್ತೇನೆ ಎಂದಿದ್ದರು.