ಐಟಿ ವಲಯದಲ್ಲಿ 12 ಗಂಟೆ ಶಿಫ್ಟ್: ಕೆಲಸದ ಅವಧಿ ವಿಸ್ತರಣೆ ಪ್ರಸ್ತಾವನೆ ಕೈಬಿಟ್ಟ ರಾಜ್ಯ ಸರ್ಕಾರ

ದಿನಕ್ಕೆ ಗರಿಷ್ಠ 10 ಗಂಟೆಗಳ (ಓವರ್‌ಟೈಮ್ ಸೇರಿದಂತೆ) ಕಾನೂನುಬದ್ಧ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ವಿಸ್ತರಿಸಲಾಗುತ್ತಿದೆ ಎಂದು ಕೆಐಟಿಯು ಆರೋಪಿಸಿತ್ತು.;

Update: 2025-07-30 05:03 GMT

ಕೆಲಸದ ಸಮಯ ವಿಸ್ತರಣೆ ನಿರ್ಧಾರ ವಾಪಸ್

ಐಟಿ ಮತ್ತು ಐಟಿಇಎಸ್ ವಲಯದಲ್ಲಿ ದೈನಂದಿನ ಕೆಲಸದ ಅವಧಿ ವಿಸ್ತರಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಬಗ್ಗೆ ಐಟಿ ಉದ್ಯೋಗಿಗಳ ಒಕ್ಕೂಟವಾದ ಕೆಐಟಿಯು ಅಧಿಕೃತ ಮಾಹಿತಿ ನೀಡಿದೆ.

ಕೆಲಸದ ಅವಧಿಯನ್ನು ದಿನಕ್ಕೆ 12 ಗಂಟೆಗಳಿಗೆ ವಿಸ್ತರಿಸುವ ಬಗ್ಗೆ ನಿಯಮ ರೂಪಿಸಲು ಕರ್ನಾಟಕ ಸರ್ಕಾರ ಇತ್ತೀಚೆಗೆ ಮುಂದಾಗಿತ್ತು. ಸರ್ಕಾರದ ಪ್ರಸ್ತಾವನೆ ವಿರುದ್ಧ ಕೆಐಟಿಯು ನಿರಂತರ ಆರು ವಾರಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿತ್ತು. ಪರಿಣಾಮ, ಪ್ರಸ್ತಾವನೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ‌ ಎಂದು ಕಾರ್ಮಿಕ ಇಲಾಖೆ ಹೆಚ್ಚುವರಿ ಕಾರ್ಮಿಕ ಆಯುಕ್ತ ಜಿ ಮಂಜುನಾಥ್ ದೃಢಪಡಿಸಿದ್ದಾರೆ ಎಂದು ಕೆಐಟಿಯು ತಿಳಿಸಿದೆ.

ಒಕ್ಕೂಟದ ಪದಾಧಿಕಾರಿಗಳೊಂದಿಗಿನ ಸಭೆಯಲ್ಲಿ ಜಿ ಮಂಜುನಾಥ್ ನಿರ್ಧಾರ ತಿಳಿಸಿದ್ದಾರೆ ಎಂದು ಕೆಐಟಿಯು ಹೇಳಿದೆ.

ಐಟಿ, ಹೋಟೆಲ್, ಗಾರ್ಮೆಂಟ್ಸ್ ಸೇರಿದಂತೆ ಕಾಯ್ದೆ ವ್ಯಾಪ್ತಿಗೆ ಬರುವ ಕಾರ್ಮಿಕರಿಗೆ ಸರ್ಕಾರದ ಪ್ರಸ್ತಾವದಿಂದ ಆಗುವ ಅನಾನುಕೂಲಗಳ ಬಗ್ಗೆ 'ದ ಫೆಡರಲ್ ಕರ್ನಾಟಕ' ಸರಣಿ ವರದಿ ಪ್ರಕಟಿಸಿತ್ತು.

ಪ್ರಸ್ತಾವಿತ ‘ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ 2025’ ಭಾಗವಾಗಿರುವ ಪ್ರಸ್ತಾವಿತ ತಿದ್ದುಪಡಿಯಲ್ಲಿ, 1961 ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯನ್ನು ಪರಿಷ್ಕರಿಸಲು ಉದ್ದೇಶಿಸಲಾಗಿತ್ತು. ಇದು ಅನುಷ್ಠಾನಗೊಂಡರೆ ದೈನಂದಿನ ಕೆಲಸದ ಸಮಯ ವಿಸ್ತರಣೆಯಾಗುತ್ತಿತ್ತು. ದಿನಕ್ಕೆ ಗರಿಷ್ಠ 10 ಗಂಟೆಗಳ (ಓವರ್‌ಟೈಮ್ ಸೇರಿದಂತೆ) ಕಾನೂನುಬದ್ಧ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ವಿಸ್ತರಿಸಲಾಗುತ್ತಿದೆ ಎಂದು ಕೆಐಟಿಯು ಆರೋಪಿಸಿತ್ತು. ಒಂದು ವೇಳೆ ಅಂತಹ ಬದಲಾವಣೆ ಮಾಡಿದ್ದರೆ, ಅದು ಎರಡು-ಪಾಳಿ ವ್ಯವಸ್ಥೆಗೆ ದಾರಿ ಮಾಡಿಕೊಡಲಿದೆ. ಅಲ್ಲದೆ, ಉದ್ಯೋಗಿಗಳ ಸಂಖ್ಯೆಯನ್ನು ಮೂರನೇ ಒಂದು ಭಾಗದಷ್ಟು ಕಡಿತಗೊಳಿಸಬೇಕಾಗಿ ಬರುವ ಸಾಧ್ಯತೆಯಿದೆ ಎಂದು ಕೆಐಟಿಯು ಎಚ್ಚರಿಸಿತ್ತು.

ಖಾಸಗಿ ವಲಯದಲ್ಲಿ ಕೆಲಸದ ಅವಧಿ ಹೆಚ್ಚಳ ಪ್ರಸ್ತಾವನೆ ಹಿನ್ನೆಲೆಯಲ್ಲಿ ನೌಕರರ ಮೇಲೆ ಬೀರುವ ಪರಿಣಾಮಗಳು,  ಅವರ ಸಮಸ್ಯೆಗಳ ಬಗ್ಗೆ ʼದ ಫೆಡರಲ್‌ ಕರ್ನಾಟಕʼ ಪ್ರಕಟಿಸಿದ್ದ ಸರಣಿ ವರದಿಗಳ ಲಿಂಕ್‌ ಇಲ್ಲಿವೆ.

Work Hour Extension Part-1: ಕೆಲಸದ ಅವಧಿ 12 ಗಂಟೆಗೆ ಹೆಚ್ಚಿಸುವ ತೀರ್ಮಾನ; ಕಾರ್ಮಿಕರ ಅಸಮಾಧಾನ 

Work Hour Extension Part- 2 |ಒತ್ತಡದ ಆತಂಕ; ಸರ್ಕಾರದ ಪ್ರಸ್ತಾಪಕ್ಕೆ ಕೆರಳಿದ ಐಟಿ ಉದ್ಯೋಗಿಗಳು

Work Hour Extension Part -3 |ಕಾರ್ಮಿಕರಿಗೆ ಕೆಲಸದ ಅವಧಿ ಹೆಚ್ಚಳ ವರವೋ -ಶಾಪವೋ?

Work Hour Extension Part -4 | ಕೆಲಸದ ಅವಧಿ ಹೆಚ್ಚಳ ; ಗಾರ್ಮೆಂಟ್ಸ್ ನೌಕರರ ಶೋಷಣೆ ಆತಂಕ

Work Hour Extension Part -5 | ಕೆಲಸದ ಅವಧಿ ವಿಸ್ತರಣೆ; ಸರ್ಕಾರಿ ನೌಕರರಿಗೆ ಏಕೆ ವಿನಾಯಿತಿ ?

Tags:    

Similar News