ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ರದ್ದು: ಸಿಎಂ ಸಿದ್ದರಾಮಯ್ಯ ಘೋಷಣೆ
ಶಿಷ್ಟ ರಕ್ಷಣೆ ಹಾಗೂ ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಮಾಡಿಕೊಂಡಿಲ್ಲ ಹಾಗೂ ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.;
ನಿವೃತ್ತ ಯೋಧ ಸಮೂಹ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು.
ದೇಶ ರಕ್ಷಣೆಯಲ್ಲಿ ತ್ಯಾಗ ಮನೋಭಾವದಿಂದ ತೊಡಗಿರುವ ಯೋಧರಿಗೆ ನೀಡಲಾಗಿದ್ದ ಕ್ಯಾಂಟೀನ್ ಸೌಲಭ್ಯಗಳ ಮೇಲಿನ ಅಬಕಾರಿ ಸುಂಕವನ್ನು ವಾಪಸ್ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ, ಅದು 140 ಕೋಟಿ ಭಾರತೀಯರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ 'ಜೈ ಹಿಂದ್ ಸಭಾ' ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ ಮಾತನಾಡಿದ ಸಿದ್ದರಾಮಯ್ಯ, ಸೈನಿಕರು, ರೈತರು, ವೈದ್ಯರು ಹಾಗೂ ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರಾಗಿದ್ದು, ಅವರ ಬಗ್ಗೆ ಗೌರವ ಭಾವನೆ ಇರಬೇಕು ಎಂದು ಪ್ರತಿಪಾದಿಸಿದರು. ಶಿಷ್ಟರ ರಕ್ಷಣೆ ಹಾಗೂ ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲಿ ಯಾವತ್ತೂ ರಾಜಿ ಮಾಡಿಕೊಂಡಿಲ್ಲ ಮತ್ತು ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಸಮೂಹ ಹಾಗೂ ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು.
ಮಾಜಿ ಯೋಧರ ನಿಗಮ ಸ್ಥಾಪನೆಗೆ ಚಿಂತನೆ
ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನೂರಾರು ಮಾಜಿ ಯೋಧರು ಮತ್ತು ಹುತಾತ್ಮರ ಕುಟುಂಬಗಳೊಂದಿಗೆ ವೇದಿಕೆ ಹಂಚಿಕೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಸುದೈವ ಎಂದರು. ಕಾಂಗ್ರೆಸ್ ಪಕ್ಷವು ಯಾವಾಗಲೂ ದೇಶ ಮತ್ತು ಸಶಸ್ತ್ರ ಪಡೆಗಳ ಜೊತೆ ನಿಲ್ಲುತ್ತದೆ. ಅದಕ್ಕಾಗಿಯೇ 'ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ' ಎಂದು ಸದಾ ಹೇಳುತ್ತಿರುತ್ತೇವೆ ಎಂದು ತಿಳಿಸಿದರು.
ಮಾಜಿ ಯೋಧರ ಕಲ್ಯಾಣಕ್ಕಾಗಿ ಒಂದು ನಿಗಮ ಸ್ಥಾಪಿಸುವ ಬಗ್ಗೆ ಚಿಂತಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಅವರು ಹೇಳಿದರು. ಕರ್ನಾಟಕ ಸರ್ಕಾರವು ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ಸದಾ ಸಿದ್ಧವಿದೆ ಎಂದು ಡಿಸಿಎಂ ಭರವಸೆ ನೀಡಿದರು.
---